Lok Sabha Election : ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಇಲ್ಲಿದೆ ಪೂರ್ಣ ವಿವರ
Lok Sabha Election : ಕರ್ನಾಟಕದ ಏಳು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.
ನವದೆಹಲಿ: ಕರ್ನಾಟಕ, ತೆಲಂಗಾಣ, ಕೇರಳ, ಛತ್ತೀಸ್ಗಢ, ಮೇಘಾಲಯ, ನಾಗಾಲ್ಯಾಂಡ್ ಮತ್ತು ಸಿಕ್ಕಿಂ ರಾಜ್ಯಗಳ 39 ಲೋಕಸಭಾ ಕ್ಷೇತ್ರಗಳಿಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಶುಕ್ರವಾರ ಅಭ್ಯರ್ಥಿಗಳ (Lok Sabha Election) ಮೊದಲ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಕರ್ನಾಟಕದಲ್ಲಿ ಏಳು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದ್ದು ಶಿವಮೊಗ್ಗದಲ್ಲಿ ನಟ ಶಿವರಾಜ್ಕುಮಾರ್ ಪತ್ನಿ ಗೀತಾ ಶಿವರಾಜ್ಕುಮಾರ್ ಅವರು ಸ್ಪರ್ಧಿಸಲಿದ್ದಾರೆ. ಇದಲ್ಲದೆ, ತುಮಕೂರು, ಮಂಡ್ಯ, ಹಾಸನ, ಬೆಂಗಳೂರು ಗ್ರಾಮಾಂತರ, ವಿಜಯಪುರ, ಹಾಗೂ ಹಾವೇರಿ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ.
ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಎರಡನೇ ಬಾರಿಗೆ ಕೇರಳದ ವಯನಾಡ್ ನಿಂದ ಸ್ಪರ್ಧಿಸಲಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ರಾಜ್ಯದ ಅಲಪ್ಪುಳದಿಂದ ಕಣಕ್ಕಿಳಿಸಲಾಗಿದೆ. ಹಾಲಿ ಸಂಸದ ಶಶಿ ತರೂರ್ ಅವರು ಕೇರಳದ ತಿರುವನಂತಪುರಂನಿಂದ ಸತತ ನಾಲ್ಕನೇ ಬಾರಿಗೆ ಸ್ಪರ್ಧಿಸಲಿದ್ದಾರೆ. ಮಾಜಿ ಕೇಂದ್ರ ಸಚಿವ 2009 ರಿಂದ ತಿರುವನಂತಪುರಂ ಸ್ಥಾನವನ್ನು ಗೆಲ್ಲುತ್ತಿದ್ದಾರೆ.
ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರನ್ನು ರಾಜನಂದಗಾಂವ್ ಕ್ಷೇತ್ರದಿಂದ ಮತ್ತು ಮಾಜಿ ಸಚಿವ ತಮರ್ಧ್ವಜ್ ಸಾಹು ಅವರನ್ನು ಮಹಾಸಮುಂದ್ ನಿಂದ ಮತ್ತು ಜೋತ್ಸ್ನಾ ಮಹಂತ್ ಅವರನ್ನು ಛತ್ತೀಸ್ಗಢದ ಕೊರ್ಬಾದಿಂದ ಕಣಕ್ಕಿಳಿಸಲು ಪಕ್ಷ ನಿರ್ಧರಿಸಿದೆ.
First Published on Vistara News.

Comments
Post a Comment