Mission Divyastra : ಐತಿಹಾಸಿಕ ಮಿಲಿಟರಿ ಸಾಧನೆ, ದೇಶೀಯವಾಗಿ ನಿರ್ಮಿಸಿದ ಅಗ್ನಿ -5 ಕ್ಷಿಪಣಿ ಸಕ್ಸೆಸ್‌ ಘೋಷಿಸಿದ ಮೋದಿ

 Mission Divyastra : ಡಿಆರ್​ಡಿಒ ಸಿದ್ಧಪಡಿಸಿರುವ ಈ ಮಿಸೈಲ್​ ಏಕಕಾಲಕ್ಕೆ ಹಲವಾರು ಗುರಿಗಳಿಗೆ ಸಿಡಿ ತಲೆಗಳನ್ನು ನಿಯೋಜಿಸುವ ಸಾಮರ್ಥ್ಯವನ್ನು ಹೊಂದಿದೆ.


ಬೆಂಗಳೂರು: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO ) ಅಭಿವೃದ್ಧಿಪಡಿಸಿದ ಮೇಡ್ ಇನ್ ಇಂಡಿಯಾ ಅಗ್ನಿ 5 ಕ್ಷಿಪಣಿಯಾಗಿರುವ ಮಿಷನ್​ ದಿವ್ಯಾಸ್ತ್ರ (Mission Divyastra) ಮೊದಲ ಪರೀಕ್ಷಾ ಹಾರಾಟವನ್ನು ಪ್ರಧಾನಿ ನರೇಂದ್ರ ಮೋದಿ (Narendra modi) ಸೋಮವಾರ ಘೋಷಿಸಿದ್ದಾರೆ.

“ಬಹು ಸ್ವತಂತ್ರ ಗುರಿಯ ಮರು-ಪ್ರವೇಶ ವಾಹನ (MIRV ) ತಂತ್ರಜ್ಞಾನದೊಂದಿಗೆ ದೇಶೀಯವಾಗಿ ಅಭಿವೃದ್ಧಿಪಡಿಸಿದ ಅಗ್ನಿ -5 ಕ್ಷಿಪಣಿಯ ಮೊದಲ ಹಾರಾಟ ಪರೀಕ್ಷೆಯಾದ ಮಿಷನ್ ದಿವ್ಯಾಸ್ತ್ರಕ್ಕಾಗಿ ನಮ್ಮ ಡಿಆರ್​ಡಿಒ ವಿಜ್ಞಾನಿಗಳ ಬಗ್ಗೆ ಹೆಮ್ಮೆಪಡುತ್ತೇನೆ” ಎಂದು ಪ್ರಧಾನಿ ಮೋದಿ ಎಕ್ಸ್​​ ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಬಹು ಸ್ವತಂತ್ರ ಗುರಿಯ ಮರು-ಪ್ರವೇಶ ವಾಹನ (MIRV) ತಂತ್ರಜ್ಞಾನದೊಂದಿಗೆ ದೇಶೀಯವಾಗಿ ಅಭಿವೃದ್ಧಿಪಡಿಸಿದ ಅಗ್ನಿ -5 ಕ್ಷಿಪಣಿಯ ಮೊದಲ ಹಾರಾಟ ಪರೀಕ್ಷೆಯಾದ ಮಿಷನ್ ದಿವ್ಯಾಸ್ತ್ರವನ್ನು ಸೋಮವಾರ ಯಶಸ್ವಿಯಾಗಿ ಪರೀಕ್ಷೆ ಮಾಡಲಾಗಿದೆ. ಇದು ಭಾರತದ ಮಿಲಿಟರಿ ಶಕ್ತಿಯಲ್ಲಿ ಹೊಸ ಮೈಲುಗಲ್ಲು ಎಂದು ಗುರುತಿಸಲಾಗಿದೆ. ಈ ಸಂಭ್ರಮವನ್ನು ಪ್ರಧಾನಿ ಮೋದಿ ಸಂಜೆ ವೇಳೆಗೆ ಹಂಚಿಕೊಂಡಿದ್ದಾರೆ.

First Published on Vistara News.

Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!