Modi in Shivamogga : ಕರ್ನಾಟಕದಲ್ಲಿ ಎಷ್ಟು ಸಿಎಂಗಳಿದ್ದಾರೆ ಗೊತ್ತಾ? ಇದು ಮೋದಿ ಲೆಕ್ಕ!

 Modi in Shivamogga : ರಾಜ್ಯದಲ್ಲಿ ಎಷ್ಟು ಸಿಎಂಗಳಿದ್ದಾರೆ ಗೊತ್ತಾ? ಹೀಗೆಂದು ಪ್ರಶ್ನಿಸಿದ ಸಿಎಂ ದೊಡ್ಡ ಪಟ್ಟಿಯನ್ನೇ ಕೊಟ್ಟಿದ್ದಾರೆ. ಹಾಗಿದ್ದರೆ ಅವರ ಪ್ರಕಾರ ರಾಜ್ಯದಲ್ಲಿರುವ ಸಿಎಂಗಳೆಷ್ಟು?


ಶಿವಮೊಗ್ಗ : ಕಾಂಗ್ರೆಸ್‌ಗೆ ಕರ್ನಾಟಕದಲ್ಲಿ ಆಡಳಿತ ನಡೆಸುವ ಒಂದು ಅವಕಾಶವನ್ನು ಜನರು ಒದಗಿಸಿದ್ದರು. ಆದರೆ, ಆ ಪಕ್ಷ ಅದನ್ನೂ ಹಾಳು ಮಾಡಿಕೊಂಡಿದೆ. ಕಾಂಗ್ರೆಸ್‌ ರಾಜ್ಯವನ್ನು ಪಕ್ಷದ ಎಟಿಎಂ ಆಗಿ (Karnataka Congress) ಬಳಸಿಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ವಾಗ್ದಾಳಿ ನಡೆಸಿದರು. ಶಿವಮೊಗ್ಗದ ಅಲ್ಲಮ ಪ್ರಭು ಮೈದಾನದಲ್ಲಿ (Modi in Shivamogga) ನಡೆದ ಲೋಕಸಭಾ ಚುನಾವಣಾ (Lok Sabha Election 2024) ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿರುವ ಮುಖ್ಯಮಂತ್ರಿಗಳ ಪಟ್ಟಿಯನ್ನೂ (How many CMs in Karnataka) ತೆರೆದಿಟ್ಟರು.

ಶಿವಮೊಗ್ಗ, ದಾವಣಗೆರೆ, ಉಡುಪಿ-ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸಂಬಂಧಿಸಿದ ಈ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್‌ ಕೈಯಲ್ಲಿ ಅಭಿವೃದ್ಧಿಯ ಒಂದೇ ಒಂದು ಅಜೆಂಡಾ ಇಲ್ಲ ಎಂದು ಆರೋಪಿಸಿದರು. ಕರ್ನಾಟಕದಲ್ಲಂತೂ ಅಭಿವೃದ್ಧಿ ಮಾಡಲು ಒಂದು ನಯಾ ಪೈಸೆ ಕೂಡಾ ಇಲ್ಲ ಎಂದು ಹೇಳಿದರು.

First Published on Vistara News.

Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!