MP Pratap Simha: ನಾನು ಜೀವ ಇರುವವರೆಗೂ ಮೋದಿ ಭಕ್ತ, ಬಂಡಾಯ ಸ್ಪರ್ಧೆ ಮಾಡಲ್ಲ ಎಂದ ಪ್ರತಾಪ್‌ ಸಿಂಹ

 MP Pratap Simha : ಮೈಸೂರು ಕ್ಷೇತ್ರದ ಟಿಕೆಟ್‌ ಮಿಸ್‌ ಆಗುವ ಆತಂಕದಲ್ಲಿ ರಾಂಗ್‌ ಆಗಿದ್ದ ಸಂಸದ ಪ್ರತಾಪ್‌ ಸಿಂಹ ಈಗ ಸ್ವಲ್ಪ ಬದಲಾಗಿದ್ದಾರೆ. ನಾನು ಮೋದಿ ಭಕ್ತ, ಬಂಡಾಯದ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.


ಮೈಸೂರು: ನಾನು ಜೀವ ಇರುವವರೆಗೂ ಮೋದಿ ಭಕ್ತ (I am Life time Modi Bhakta). ಪಕ್ಷ ಬಿಟ್ಟು ಎಲ್ಲಿಗೂ ಹೋಗಲ್ಲ. ನಾನು ಸಾಯುವವರೆಗೂ ಬಿಜೆಪಿ ಕಾರ್ಯಕರ್ತ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲ್ಲ. (Will not contest as Rebel): ಹೀಗೆ ಅತ್ಯಂತ ಸ್ಪಷ್ಟ ಶಬ್ದಗಳಲ್ಲಿ ಹೇಳಿದ್ದಾರೆ ಮೈಸೂರು -ಕೊಡಗು ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರತಾಪ್ ಸಿಂಹ (MP Pratap Simha).

ಲೋಕಸಭಾ ಚುನಾವಣೆಯಲ್ಲಿ (Parliament Election) ಮೈಸೂರು ಕ್ಷೇತ್ರದ ಬಿಜೆಪಿ ಟಿಕೆಟ್‌ ಕೈ ತಪ್ಪುವ ಆತಂಕದಲ್ಲಿರುವ ಅವರು ಮಂಗಳವಾರ ಸ್ವಲ್ಪ ಮಟ್ಟಿಗೆ ಭಾವೋದ್ವೇಗದಿಂದ ಮಾತನಾಡಿದ್ದರೂ ಬುಧವಾರ ಸ್ವಲ್ಪ ಸೈರಣೆ ತಂದುಕೊಂಡಿದ್ದಾರೆ. ಬುಧವಾರ ಮೈಸೂರಿನ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಸಂಸದ ಪ್ರತಾಪ್ ಸಿಂಹ ಅವರಿಗೆ ಅಭಿನಂದನಾ ಸಮಾರಂಭ ನಡೆಯಿತು. ಮೈಸೂರಿನ ಪತ್ರಕರ್ತರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಕೆ.ಬಿ.ಗಣಪತಿ ಸೇರಿದಂತೆ ಹಿರಿಯ ಸಾಹಿತಿಗಳು, ಸಮಾಜ ಸೇವಕರು, ಕನ್ನಡ ಪರ ಹೋರಾಟಗಾರರು ಸಮಾರಂಭದಲ್ಲಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರತಾಪ್‌ ಸಮಾಧಾನದಿಂದಲೇ ಇದ್ದರು.

First Published on Vistara News.

Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!