PM Narendra Modi : ಕಾಂಗ್ರೆಸ್‌ಗೆ ಭ್ರಷ್ಟಾಚಾರವೇ ಉಸಿರು, ಅದರ ಉಸಿರು ನಿಲ್ಲಿಸಿ: ಕಲಬುರಗಿಯಲ್ಲಿ ಮೋದಿ ಕರೆ

 PM Narendra Modi : ಕರ್ನಾಟಕದ ಚುನಾವಣಾ ಅಖಾಡಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರವೇಶ ಮಾಡಿದ್ದಾರೆ. ಕಲಬುರಗಿಯಲ್ಲಿ ನಡೆದ ಬೃಹತ್‌ ಸಮಾವೇಶದಲ್ಲಿ ಅವರು ಮಾತನಾಡಿದರು.


ಕಲಬುರಗಿ : ಕಾಂಗ್ರೆಸ್‌ ಮತ್ತು ಭ್ರಷ್ಟಾಚಾರವನ್ನು ಬೇರೆ ಬೇರೆ ಮಾಡಲು ಸಾಧ್ಯವೇ ಇಲ್ಲ. ಕಾಂಗ್ರೆಸ್‌ಗೆ ಭ್ರಷ್ಟಾಚಾರವೇ ಉಸಿರು. ಅದಿಲ್ಲದೆ ಒಂದು ಕ್ಷಣವೂ ಅದು ಬದುಕದು. ಕಾಂಗ್ರೆಸ್‌ ಕರ್ನಾಟಕವನ್ನು ಫ್ಯಾಮಿಲಿ ಎಟಿಎಂ ಮಾಡಿಕೊಂಡಿದೆ. ಕರ್ನಾಟಕದ ನಾಯಕರು ಕೆಲವರು ತಿಜೋರಿ ತುಂಬಲು, ಜೇಬು ತುಂಬಲು ಪ್ರಯತ್ನಿಸುತ್ತಿದ್ದಾರೆ. ಈಗ ಭ್ರಷ್ಟಾಚಾರದ ಉಸಿರನ್ನು ನಿಲ್ಲಿಸಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ (Lok sabha Election 2024) 400 ಸ್ಥಾನಗಳ ಗುರಿ ಹೊತ್ತುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಕರ್ನಾಟಕದ ಚುನಾವಣಾ ಅಖಾಡಕ್ಕೆ ಕಲಬುರಗಿ ಮೂಲಕ ಎಂಟ್ರಿ ಕೊಟ್ಟು ಬೃಹತ್‌ ಸಮಾವೇಶದಲ್ಲಿ ಮಾತನಾಡಿದರು.

ಕಲಬುರಗಿಯ ಎನ್‌.ವಿ. ಆಟದ ಮೈದಾನದಲ್ಲಿ (Kalaburagi Samavesha) ನಡೆದ ಬೃಹತ್‌ ಸಮಾವೇಶದಲ್ಲಿ ಮಾನಾಡಿದ ಅವರು ಕಾಂಗ್ರೆಸ್‌ ವಿರುದ್ಧ ಟೀಕಾ ಪ್ರಹಾರ ನಡೆಸಿದರು.

First Published on Vistara news.

Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!