Sedition Case: ಪಾಕ್ ಜಿಂದಾಬಾದ್ ಘೋಷಣೆ; ಸರ್ಕಾರದಿಂದ ಬೋಗಸ್ FSL ವರದಿ: ವಿಜಯೇಂದ್ರ ಅನುಮಾನ
Sedition Case: ಎಫ್.ಎಸ್.ಎಲ್ ವರದಿ ಬಂದಿದೆ. ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದು ದೃಢಪಟ್ಟ ಮಾಹಿತಿ ನಮಗಿದೆ. ಆದರೆ, ರಾಜ್ಯ ಸರ್ಕಾರದ ವಿಳಂಬ ನೀತಿ, ನಡವಳಿಕೆಯನ್ನು ಗಮನಿಸಿದರೆ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ ಎಂಬಂತಿದೆ. ದೇಶದ್ರೋಹಿಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಬೋಗಸ್ FSL (ಎಫ್.ಎಸ್.ಎಲ್) ವರದಿ ತಯಾರಿಸುವ ಅನುಮಾನ ಕಾಡುವಂತಾಗಿದೆ ಎಂದು ಬಿ.ವೈ. ವಿಜಯೇಂದ್ರ ಅನುಮಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ (Rameshwaram Cafe Bomb Blast) ವಿಷಯದಲ್ಲಿ ಬಿಜೆಪಿ ರಾಜಕಾರಣ ಮಾಡುವುದಿಲ್ಲ. ಒಂದು ಜವಾಬ್ದಾರಿಯುತ ವಿಪಕ್ಷವಾಗಿ ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಸಹಕಾರ ಕೊಡಲಿದ್ದೇವೆ ಎಂದು ನಿನ್ನೆಯೇ ಸ್ಪಷ್ಟಮಾತುಗಳಲ್ಲಿ ಹೇಳಿದ್ದೇವೆ. ಆದರೆ, ಸರ್ಕಾರವೇ ಸೂಕ್ತ ರೀತಿಯಲ್ಲಿ ತನಿಖೆ ಮಾಡುತ್ತಿಲ್ಲ. ಇನ್ನು ರಾಜ್ಯಸಭಾ ಫಲಿತಾಂಶ ವೇಳೆ ವಿಧಾನಸೌಧದೊಳಗೆ ಪಾಕಿಸ್ತಾನ್ ಜಿಂದಾಬಾದ್ (Pakistan Zindabad slogans) ಎಂದು ಕೂಗಲಾಗಿದೆ. ದೇಶದ್ರೋಹದ ಪ್ರಕರಣ (Sedition Case) ಇದಾಗಿದೆ. ಆದರೆ, ಆರೋಪಿ ರಕ್ಷಣೆಗೆ ರಾಜ್ಯ ಸರ್ಕಾರ ನಿಂತಿದೆ. ಇದಕ್ಕಾಗಿ ಎಫ್‌ಎಸ್‌ಎಲ್ ವರದಿಯನ್ನೇ ತಿರುಚಲು ಹೊರಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅನುಮಾನವನ್ನು ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ವೈ. ವಿಜಯೇಂದ್ರ, ಎಫ್.ಎಸ್.ಎಲ್ ವರದಿ ಬಂದಿದೆ. ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದು ದೃಢಪಟ್ಟ ಮಾಹಿತಿ ನಮಗಿದೆ. ಆದರೆ, ರಾಜ್ಯ ಸರ್ಕಾರದ ವಿಳಂಬ ನೀತಿ, ನಡವಳಿಕೆಯನ್ನು ಗಮನಿಸಿದರೆ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ ಎಂಬಂತಿದೆ. ದೇಶದ್ರೋಹಿಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಬೋಗಸ್ FSL (ಎಫ್.ಎಸ್.ಎಲ್) ವರದಿ ತಯಾರಿಸುವ ಅನುಮಾನ ಕಾಡುವಂತಾಗಿದೆ ಎಂದು ಆರೋಪಿಸಿದರು.

Comments
Post a Comment