Viksit Bharat: 2047ರ ವೇಳೆಗೆ ‘ವಿಕಸಿತ ಭಾರತ’ ನಿರ್ಮಾಣ; ಮೋದಿ ಮಾಸ್ಟರ್ ಪ್ಲ್ಯಾನ್ ಹೀಗಿದೆ
Viksit Bharat: ವಿಕಸಿತ ಭಾರತ ನಿರ್ಮಾಣಕ್ಕೆ ಕ್ರಿಯಾಯೋಜನೆ ರೂಪಿಸುವುದು, ಲೋಕಸಭೆ ಚುನಾವಣೆ ಸೇರಿ ಹಲವು ವಿಷಯಗಳ ಕುರಿತು ಚರ್ಚಿಸಲು ನರೇಂದ್ರ ಮೋದಿ ಅವರು ಸಚಿವರೊಂದಿಗೆ ಸಭೆ ನಡೆಸಿದ್ದಾರೆ. ಸಭೆಯ ಪ್ರಮುಖ ಅಂಶಗಳ ಮಾಹಿತಿ ಇಲ್ಲಿದೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಚುನಾವಣೆ ರ‍್ಯಾಲಿಯೇ ಇರಲಿ, ಸಾರ್ವಜನಿಕ ಸಮಾರಂಭವೇ ಇರಲಿ, ಜಾಗತಿಕ ವೇದಿಕೆಯೇ ಸಿಗಲಿ, ‘2047ರ ವೇಳೆಗೆ ವಿಕಸಿತ ಭಾರತ (Viksit Bharat) ನಿರ್ಮಾಣವೇ ನಮ್ಮ ಗುರಿ’ ಎಂದು ಹೇಳುತ್ತಾರೆ. ಹಾಗಾದರೆ, 2047ರ ವೇಳೆಗೆ ವಿಕಸಿತ ಭಾರತ (Developed India) ನಿರ್ಮಾಣಕ್ಕೆ ಏನು ಮಾಡಬೇಕು? ಇದನ್ನು ಚರ್ಚಿಸಲೆಂದೇ ನರೇಂದ್ರ ಮೋದಿ ಅವರು ಭಾನುವಾರ (ಮಾರ್ಚ್ 3) ಸಚಿವರೊಂದಿಗೆ ಸಭೆ ನಡೆಸಿದ್ದು, ವಿಕಸಿತ ಭಾರತದ ಕಲ್ಪನೆ ಸಾಕಾರಕ್ಕೆ ತೆಗೆದುಕೊಳ್ಳಬೇಕಾದ ಕ್ರಮಗಳು, ರೂಪಿಸಬೇಕಾದ ಯೋಜನೆಗಳ ಕುರಿತು ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.
ವಿಕಸಿತ ಭಾರತ ನಿರ್ಮಾಣಕ್ಕಾಗಿ ನರೇಂದ್ರ ಮೋದಿ ಅವರು ಸಭೆಯಲ್ಲಿ ವಿಷನ್ ಇಂಡಿಯಾ ಡಾಕ್ಯುಮೆಂಟ್ ಕೂಡ ರಿಲೀಸ್ ಮಾಡಿದ್ದಾರೆ. 25 ವರ್ಷಗಳ ದೂರದೃಷ್ಟಿಯ ಕನಸು ನನಸಾಗಿಸುವ ದಿಸೆಯಲ್ಲಿ ಮುಂದಿನ 5 ವರ್ಷಗಳಲ್ಲಿ ಕೈಗೊಳ್ಳಬಹುದಾದ ಯೋಜನೆಗಳು, ದೇಶದ ಜನರ ಏಳಿಗೆ, ಸುಸ್ಥಿರ ಆರ್ಥಿಕತೆ ನಿರ್ಮಾಣ, ಉದ್ಯೋಗ ಸೃಷ್ಟಿ, ನಾವೀನ್ಯತೆ, ತಂತ್ರಜ್ಞಾನದ ಅಳವಡಿಕೆ ಸೇರಿ ಹಲವು ವಿಷಯಗಳ ಕುರಿತು ನರೇಂದ್ರ ಮೋದಿ ಅವರು ಮಾತನಾಡಿದ್ದು, ಸಚಿವರ ಅಭಿಪ್ರಾಯವನ್ನೂ ಸಂಗ್ರಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
First Published on Vistara News.

Comments
Post a Comment