Water Crisis: ಬೆಂಗಳೂರಿನ ಕೊಳವೆಬಾವಿ ನೀರು ಪೂರೈಕೆ ಟ್ಯಾಂಕರ್‌ಗಳಿನ್ನು ಸರ್ಕಾರದ ಸುಪರ್ದಿಗೆ: ಡಿ.ಕೆ. ಶಿವಕುಮಾರ್
Water Crisis: ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿದೆ. ಪ್ರತಿನಿತ್ಯ ಬಿಡಬ್ಲ್ಯೂಎಸ್ಎಸ್‌ಬಿ ಹಾಗೂ ಪಾಲಿಕೆ ಅಧಿಕಾರಿಗಳು ಸಭೆ ಮಾಡುತ್ತಿದ್ದಾರೆ. ಕುಡಿಯುವ ನೀರಿನ ದಂಧೆ ತಡೆಯಲು ಕೊಳವೆಬಾವಿ ಹಾಗೂ ಅವುಗಳಿಂದ ನೀರು ಪೂರೈಕೆ ಮಾಡುವ ಟ್ಯಾಂಕರ್‌ಗಳು ಮಾ. 7ರ ಒಳಗಾಗಿ ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರು: ಬೆಂಗಳೂರಿನ ನೀರಿನ ಅಭಾವ (Water Crisis) ನೀಗಿಸಲು ಕೊಳವೆಬಾವಿ ನೀರು ಪೂರೈಸುವ (Borewell water supply) ಟ್ಯಾಂಕರ್‌ಗಳನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಮಾಹಿತಿ ನೀಡಿದರು.
ಈ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್, ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿದೆ. ಪ್ರತಿನಿತ್ಯ ಬಿಡಬ್ಲ್ಯೂಎಸ್ಎಸ್‌ಬಿ ಹಾಗೂ ಪಾಲಿಕೆ ಅಧಿಕಾರಿಗಳು ಸಭೆ ಮಾಡುತ್ತಿದ್ದಾರೆ. ಕುಡಿಯುವ ನೀರಿನ ದಂಧೆ ತಡೆಯಲು ಕೊಳವೆಬಾವಿ ಹಾಗೂ ಅವುಗಳಿಂದ ನೀರು ಪೂರೈಕೆ ಮಾಡುವ ಟ್ಯಾಂಕರ್‌ಗಳು ಮಾ. 7ರ ಒಳಗಾಗಿ ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದೇವೆ ಎಂದು ತಿಳಿಸಿದರು.
ಕೊಳವೆ ಬಾವಿಗಳ ಮೂಲಕ ಬೆಂಗಳೂರಿನ ಕುಡಿಯುವ ನೀರಿನ ಅಭಾವವನ್ನು ನೀಗಿಸುತ್ತೇವೆ. ಈ ವಿಚಾರವಾಗಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ಕರೆಯಲಾಗಿದೆ. ಇನ್ನು ನನ್ನ ಇಲಾಖೆ ಅನುದಾನದಿಂದ ಬೆಂಗಳೂರಿನ ಎಲ್ಲ ಕ್ಷೇತ್ರಗಳ ಕುಡಿಯುವ ನೀರಿನ ಪೂರೈಕೆಗೆ ತಲಾ 10 ಕೋಟಿ ರೂ. ನೀಡಲಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
First Published on Vistara News.

Comments
Post a Comment