ಮೈಸೂರಲ್ಲಿ ಸಿದ್ದುಗೆ ಟಕ್ಕರ್, ಕರಾವಳಿಯಲ್ಲಿ ಅಲೆ; ನಾಳೆ ಕರ್ನಾಟಕದಲ್ಲಿ ಮೋದಿ ಹವಾ, ಇಲ್ಲಿದೆ ವಿವರ
Modi In Karnataka: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಕಾವನ್ನು ಇನ್ನಷ್ಟು ಹೆಚ್ಚಿಸಲಿದ್ದಾರೆ. ಮೈಸೂರಿನಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿರುವ ಮೋದಿ, ಬಳಿಕ ಮಂಗಳೂರಿನಲ್ಲಿ ರೋಡ್ ಶೋ ನಡೆಸುವ ಮೂಲಕ ಅಬ್ಬರದ ಪ್ರಚಾರ ಮಾಡಲಿದ್ದಾರೆ. ಜನರಲ್ಲಿ ಬಿಜೆಪಿ ಪರ ಅಲೆ ಸೃಷ್ಟಿಸುವ ಜತೆಗೆ ಕಾರ್ಯಕರ್ತರು ಹಾಗೂ ನಾಯಕರ ಉತ್ಸಾಹವನ್ನು ಹೆಚ್ಚಿಸುವುದು ಕೂಡ ಮೋದಿ ಭೇಟಿಯ ಪ್ರಮುಖ ಅಜೆಂಡಾ ಆಗಿದೆ.
ಬೆಂಗಳೂರು: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕಳೆದ ತಿಂಗಳು ಕಲಬುರಗಿ ಹಾಗೂ ಶಿವಮೊಗ್ಗದಲ್ಲಿ ಅಬ್ಬರದ ಪ್ರಚಾರ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾನುವಾರ (ಏಪ್ರಿಲ್ 14) ಕರ್ನಾಟಕಕ್ಕೆ (Modi In Karnataka) ಭೇಟಿ ನೀಡಲಿದ್ದಾರೆ. ಮೈಸೂರಿನಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳುವ ಮೋದಿ, ಸಂಜೆ ಮಂಗಳೂರಿನಲ್ಲಿ ರೋಡ್ ಶೋ ಮೂಲಕ ಭರ್ಜರಿಯಾಗಿ ಪ್ರಚಾರ ನಡೆಸಲಿದ್ದಾರೆ.
ಮೈಸೂರಿನಲ್ಲಿ ಸಿದ್ದರಾಮಯ್ಯಗೆ ಟಕ್ಕರ್
ಮೈಸೂರು ಹಾಗೂ ಚಾಮರಾಜ ನಗರ ಲೋಕಸಭೆ ಕ್ಷೇತ್ರಗಳನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನರೇಂದ್ರ ಮೋದಿ ಅವರು ಮೈಸೂರಿನಲ್ಲಿ ಟಕ್ಕರ್ ಕೊಡಲಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನರೇಂದ್ರ ಮೋದಿ ಅವರು ಭಾನುವಾರ ಸಂಜೆ 4 ಗಂಟೆಗೆ ನಡೆಯುವ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಲೋಕಸಭೆ ಕ್ಷೇತ್ರಗಳನ್ನು ಗಮನದಲ್ಲಿರಿಸಿಕೊಂಡು ಸಮಾವೇಶ ಆಯೋಜಿಸಲಿದ್ದು, ಲಕ್ಷಾಂತರ ಜನ ಸೇರುವ ನಿರೀಕ್ಷೆ ಇದೆ.
First Published on Vistara News.

Comments
Post a Comment