Congress Nominations: ಸೌಮ್ಯಾ ರೆಡ್ಡಿ ಸೇರಿ ಕೈ ಅಭ್ಯರ್ಥಿಗಳಿಂದ ನಾಮಪತ್ರ; ಶಕ್ತಿ ಪ್ರದರ್ಶನ

 Congress Nominations: ಕರ್ನಾಟಕದಲ್ಲಿ ಅತಿ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕು ಎಂಬ ಆತ್ಮವಿಶ್ವಾಸದಿಂದ ಮುನ್ನುಗ್ಗುತ್ತಿರುವ ಕಾಂಗ್ರೆಸ್‌ ಅಭ್ಯರ್ಥಿಗಳು ಸೋಮವಾರ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಅಭ್ಯರ್ಥಿಗಳು ಶಕ್ತಿ ಪದರ್ಶನ ಮಾಡಿದರು. ಇವರಿಗೆ ಪಕ್ಷದ ನಾಯಕರು ಕೂಡ ಸಾಥ್‌ ನೀಡಿದರು.


ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ (Lok Sabha Election 2024) ಕಣ ದಿನೇದಿನೆ ರಂಗೇರುತ್ತಿದ್ದು, ನಾಯಕರು ಪ್ರಚಾರದಲ್ಲಿ ನಿರತರಾಗಿದ್ದರೆ, ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಅದರಲ್ಲೂ, ಸೋಮವಾರ (ಏಪ್ರಿಲ್‌ 1) ಕಾಂಗ್ರೆಸ್‌ನ (Congress) ಸಾಲು ಸಾಲು ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದರು. ಬೆಂಗಳೂರು ದಕ್ಷಿಣದಿಂದ ಸೌಮ್ಯಾ ರೆಡ್ಡಿ (Sowmya Reddy), ಚಿಕ್ಕಬಳ್ಳಾಪುರದಲ್ಲಿ ರಕ್ಷಾರಾಮಯ್ಯ ಸೇರಿ ಹಲವು ಅಭ್ಯರ್ಥಿಗಳು ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು.

ಆಟೋದಲ್ಲಿ ತೆರಳಿ ನಾಮಪತ್ರ ಸಲ್ಲಿಸಿದ ಸೌಮ್ಯಾ ರೆಡ್ಡಿ

ನಾಮಪತ್ರ ಸಲ್ಲಿಕೆಗೂ ಮೊದಲು ಬೃಹತ್‌ ಮೆರವಣಿಗೆ ಮೂಲಕ ಶಕ್ತಿ ಪ್ರದರ್ಶಿಸಿದ ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರು ಆಟೋದಲ್ಲಿ ತೆರಳಿ ನಾಮಪತ್ರ ಸಲ್ಲಿಸಿದರು. ಸೌಮ್ಯಾ ರೆಡ್ಡಿ ಅವರಿಗೆ ನಿರ್ಮಾಪಕ ಉಮಾಪತಿ ಸೇರಿ ಹಲವರು ಸಾಥ್‌ ನೀಡಿದರು. ಬಳಿಕ ಮಾತನಾಡಿದ ಅವರು, “ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ. ಕ್ಷೇತ್ರದ ಪ್ರತಿಯೊಂದು ಭಾಗಕ್ಕೂ ತೆರಳಿ ಪ್ರಚಾರ ಕೈಗೊಳ್ಳುತ್ತೇನೆ” ಎಂದು ತಿಳಿಸಿದರು...

First Published on Vistara News.

Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!