DK Shivakumar: ಮತಯಾಚನೆ ವೇಳೆ ಬೆದರಿಕೆ ಆರೋಪ; ಡಿಕೆಶಿ ವಿರುದ್ಧ ಎಫ್‌ಐಆರ್‌

 DK Shivakumar: ಆರ್‌.ಆರ್.ನಗರ ಅಪಾರ್ಟ್‌ಮೆಂಟ್‌ನಲ್ಲಿ ಮತಯಾಚನೆ ವೇಳೆ ಮತದಾರರಿಗೆ ಡಿಕೆಶಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿತ್ತು. ಇದರ ಬೆನ್ನಲ್ಲೇ ಪೊಲೀಸರು ಮಾಹಿತಿ ಪಡೆದು ಎಫ್ಐಆರ್ ದಾಖಲಿಸಿದ್ದಾರೆ.


ಬೆಂಗಳೂರು: ಮತಯಾಚನೆ ವೇಳೆ ಬೆದರಿಕೆ ಆರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ವಿರುದ್ಧ ನಗರದ ಆರ್‌ಎಂಸಿ ಯಾರ್ಡ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಆರ್‌.ಆರ್. ನಗರ ಅಪಾರ್ಟ್‌ಮೆಂಟ್‌ವೊಂದರಲ್ಲಿ ಸಹೋದರ ಡಿ.ಕೆ.ಸುರೇಶ್‌ ಪರ ಮತಯಾಚನೆ ವೇಳೆ ಮತದಾರರಿಗೆ ಬೆದರಿಕೆ ಹಾಕಿದ್ದರು ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಡಿ.ಕೆ.ಶಿವಕುಮಾರ್‌ (DK Shivakumar) ವಿರುದ್ಧ ಪ್ರಕರಣ ದಾಖಲಾಗಿದೆ.

ಆರ್‌.ಆರ್.ನಗರ ಅಪಾರ್ಟ್‌ಮೆಂಟ್‌ನಲ್ಲಿ ಮತಯಾಚನೆ ವೇಳೆ ಮತದಾರರಿಗೆ ಡಿಕೆಶಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿತ್ತು. ಇದರ ಬೆನ್ನಲ್ಲೇ ಪೊಲೀಸರು ಮಾಹಿತಿ ಪಡೆದು ಎಫ್ಐಆರ್ ದಾಖಲಿಸಿದ್ದಾರೆ. ಲಂಚ ಮತ್ತು ಚುನಾವಣೆಯಲ್ಲಿ ಅನಗತ್ಯ ಪ್ರಭಾವ ಬಳಸಿರುವ ಆರೋಪದಡಿ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಎಫ್.ಎಸ್.ಟಿ ಮುಖ್ಯಸ್ಥ ದಿನೇಶ್ ಕುಮಾರ್ ಅವರು ನೀಡಿದ ದೂರಿನ ಮೇರೆಗೆ ಡಿಕೆಶಿ ವಿರುದ್ಧ ಪ್ರಕರಣ ದಾಖಲಾಗಿದೆ.

First Published on Vistara News.

Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!