Fake Facebook: ಯತೀಂದ್ರ ಸಿದ್ದರಾಮಯ್ಯ ಹೆಸರಲ್ಲಿ ನಕಲಿ ಫೇಸ್‌ಬುಕ್‌; ಕಾಂಗ್ರೆಸ್‌ ಮುಖಂಡರ ವಿರುದ್ಧ ಅವಹೇಳನಕಾರಿ ಪೋಸ್ಟ್‌

 Yathindra Siddaramaiah : ಯತೀಂದ್ರ ಸಿದ್ದರಾಮಯ್ಯ ಹೆಸರಲ್ಲಿ ಕಿಡಿಗೇಡಿಗಳು ನಕಲಿ ಫೇಸ್‌ಬುಕ್‌ (Fake Facebook Page) ಪೇಜ್‌ ಕ್ರಿಯೇಟ್‌ ಮಾಡಿದ್ದಾರೆ. ನಕಲಿ ಫೇಸ್‌ಬುಕ್‌ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಆರ್‌ಆರ್‌ನಗರ ಕೈ ಅಭ್ಯರ್ಥಿ ಕುಸುಮಾ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಹಾಕಲಾಗಿದೆ.


ಬೆಂಗಳೂರು: ಕಾಂಗ್ರೆಸ್‌ ಮುಖಂಡ ಯತೀಂದ್ರ ಸಿದ್ದರಾಮಯ್ಯರ (Yathindra Siddaramaiah) ಹೆಸರಿನಲ್ಲಿ ನಕಲಿ ಫೇಸ್ ಬುಕ್ ಪೇಜ್ (Fake Facebook) ಕ್ರಿಯೇಟ್‌ ಮಾಡಲಾಗಿದೆ. ಯತೀಂದ್ರ ಸಿದ್ದರಾಮಯ್ಯ ಅಭಿಮಾನಿಗಳ ಬಳಗ ಎಂಬ ನಕಲಿ ಫೇಸ್‌ಬುಕ್ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಲಾಗಿದೆ. ಅಲ್ಲದೇ ಆರ್.ಆರ್ ನಗರ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ವಿರುದ್ಧವೂ ಕಿಡಿಗೇಡಿಗಳು ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆ.

ಫೇಸ್ ಬುಕ್ ಡಿಪಿಯಲ್ಲಿ ಯತೀಂದ್ರ ಫೋಟೋ ಹಾಕಿರುವ ಕಿರಾತಕರು, ಸಿಎಂ ಸಿದ್ದರಾಮಯ್ಯ ಮತ್ತು ಟಿಪ್ಪು ಸುಲ್ತಾನ್ ಭಾವಚಿತ್ರವನ್ನು ಮಾರ್ಫಿಂಗ್ ಮಾಡಿ ಪೋಸ್ಟ್ ಮಾಡಿದ್ದಾರೆ. ಈ ಸಂಬಂಧ ಕಾಂಗ್ರೆಸ್ ಮುಖಂಡ ಶಶಾಂಕ್ ಗೌಡ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ...

First Published on Vistara News.


Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!