Hassan Pen Drive Case: ಪೆನ್‌ ಡ್ರೈವ್‌ ಹೊರ ಬಿಡುವ ಚಿಲ್ಲರೆ ಕೆಲಸ ಮಾಡಲ್ಲ; ಅಸೆಂಬ್ಲಿಗೆ ಬರುವಂತೆ ಎಚ್‌ಡಿಕೆಗೆ ಡಿಕೆಶಿ ಸವಾಲು

 Hassan Pen Drive Case: ಮಹಿಳೆಯರಿಗೆ ರಕ್ಷಣೆ ಕೊಡಬೇಕು. ಮರ್ಯಾದೆ ಹೋಗುತ್ತದೆ. ಇವರ ಚಟಕ್ಕೆ ವಿಡಿಯೊ ಮಾಡಿಕೊಂಡು ಪದೇ ಪದೆ ಬರಬೇಕು ಎಂದು ಪೀಡಿಸುತ್ತಾರೆ. ಭಗವಂತ ಇದನ್ನು ಕ್ಷಮಿಸಲ್ಲ. ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವಾಗ ಯಾರು ಜತೆಗೆ ಇದ್ದರು? ಯಾರು ಯಾರಿಗೆ ಕರೆ ಮಾಡಿದರು ಎಂದು ಅವರನ್ನೇ ಕೇಳಿ. ಅಮಿತ್ ಶಾ ಅವರು ಮೈಸೂರಿಗೆ ಬಂದಾಗ ಪ್ರಜ್ವಲ್‌ ರೇವಣ್ಣ ಅವರಿಗೆ ಟಿಕೆಟ್ ಕೊಡಬೇಡಿ ಎಂದು ಹೇಳಿದ್ದರು. ಆದರೆ, ಕೊನೆಗೆ ಏಕೆ ಕೊಟ್ಟರು? ಅಮಿತ್‌ ಶಾ ಬೇಡವನ್ನೆಲು ಏನು ಕಾರಣ? ಎಂದು ಡಿ.ಕೆ. ಶಿವಕುಮಾರ್‌ ಪ್ರಶ್ನೆ ಮಾಡಿದ್ದಾರೆ.


ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ತಮ್ಮ ಮೇಲೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮಾಡಿರುವ ಆರೋಪವನ್ನು ಡಿಸಿಎಂ ಡಿ.ಕೆ. ಶಿವಕುಮಾರ್‌ ನಿರಾಕರಣೆ ಮಾಡಿದ್ದಾರೆ. ಪೆನ್‌ಡ್ರೈವ್‌ ಹೊರಬಿಡುವಂತಹ ಚಿಲ್ಲರೆ ಕೆಲಸವನ್ನು ನಾನಂತೂ ಮಾಡಲ್ಲ. ಚುನಾವಣೆಯಲ್ಲಿ ಫೇಸ್ ಮಾಡುತ್ತೇನೆ. ನಾನು ಪೆನ್ ಡ್ರೈವ್ ಇದೆ ಎಂದು ಹೆಸರಿಸುವುದಿಲ್ಲ. ಅಸೆಂಬ್ಲಿಗೆ ಬನ್ನಿ ಎಂದು ಕರೆದಿದ್ದೇನೆ‌ ಎಂದು ಸವಾಲು ಹಾಕಿದರು.

ಬೆಂಗಳೂರಿನಲ್ಲಿ ದಿಢೀರ್‌ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ನಾವು ನಮ್ಮ ಪೊಲಿಟಿಕಲ್ ಟೂರ್ ಬಗ್ಗೆ ಮೀಟಿಂಗ್ ಮಾಡಿದ್ದೇವೆ. ಯಾರು ಎಲ್ಲಿ ಪ್ರಚಾರ ಮಾಡಬೇಕು ಎಂದು ಚರ್ಚೆ ಮಾಡಿದ್ದೇವೆ. ಕಾಂಗ್ರೆಸ್‌ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ರಾಜ್ಯಕ್ಕೆ ಮತ್ತೊಮ್ಮೆ ಆಗಮಿಸಲಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಎಲ್ಲಿ ಭಾಗಿಯಾಗಬೇಕು, ನಾನು ಎಲ್ಲಿ ಭಾಗಿಯಾಗಬೇಕು ಎಂದು ಚರ್ಚೆ ಮಾಡಿದ್ದೇವೆಯೇ ವಿನಃ ಪೆನ್ ಡ್ರೈವ್ ವಿಚಾರದ ಬಗ್ಗೆ ಚರ್ಚೆ ಮಾಡಿಲ್ಲ ಎಂದು ಹೇಳಿದರು.

First Published on Vistara News.

Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!