K. Annamalai: ಬದುಕು ಬದಲಿಸಿದ ಮಾನಸ ಸರೋವರ ಯಾತ್ರೆ! ಕೆ.ಅಣ್ಣಾಮಲೈ ಕುರಿತ ಕುತೂಹಲಕರ ಸಂಗತಿಗಳಿವು
K Annamalai ಲೋಕಸಭಾ ಚುನಾವಣೆಯ ಕೊಯಮತ್ತೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಣ್ಣಾಮಲೈ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಕುತೂಹಲಕರ ವಿಚಾರಗಳು ಇಲ್ಲಿವೆ
ಬೆಂಗಳೂರು: ಪೊಲೀಸ್ ಹುದ್ದೆಯಲ್ಲಿರುವಾಗ ತಮ್ಮ ಕಟ್ಟುನಿಟ್ಟಾದ ಕಾರ್ಯಶೈಲಿಯಿಂದ “ಸಿಂಗಂ ಅಣ್ಣ” ಎಂದು ಬಿರುದು ಪಡೆದ ನಿವೃತ್ತ ಪೊಲೀಸ್ ಅಧಿಕಾರಿ, ತಮಿಳುನಾಡಿನ ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ (k Annamalai) ಅವರು ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದರ ಮೂಲಕ ಲೋಕಸಭಾ ಚುನಾವಣೆಗೆ ಪದಾರ್ಪಣೆ ಮಾಡಿದ್ದಾರೆ.
ಅಣ್ಣಾಮಲೈ ಅವರು ಈ ಹಿಂದೆ 2021ರಲ್ಲಿ ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಡಿಎಂಕೆಯ ಆರ್ ಇಳಂಗೋವನ್ ವಿರುದ್ಧ ಸೋತಿದ್ದರು. ಉತ್ತಮ ಪೊಲೀಸ್ ಅಧಿಕಾರಿ ಎಂದು ಜನಪ್ರಿಯರಾದ ಕೆ. ಅಣ್ಣಾಮಲೈ ಅವರು ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮತ್ತೆ ರಾಜಕೀಯ ರಂಗಕ್ಕೆ ಧುಮುಕುವ ಮೂಲಕ ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಅಣ್ಣಾಮಲೈ ಅವರ ಕುರಿತಾದ ಕೆಲವು ಕುತೂಹಲಕರ ಸಂಗತಿಗಳು ಇಲ್ಲಿವೆ.

Comments
Post a Comment