Karnataka Drought: ಬರ ಪರಿಹಾರದಲ್ಲಿ ಸಿಎಂ ಸಿದ್ದರಾಮಯ್ಯ ಮಾಡಿದ ತಪ್ಪುಗಳ ಪಟ್ಟಿಯನ್ನೇ ಇಟ್ಟ ಆರ್.‌ ಅಶೋಕ್!

 Karnataka Drought: ಬರಗಾಲ ಘೋಷಣೆಗೆ ತಡ ಮಾಡಿದ್ದೇ ಸಿಎಂ ಸಿದ್ದರಾಮಯ್ಯನವರ ತಪ್ಪು, ರಾಜ್ಯ ಸರ್ಕಾರದ ಕಡೆಯಿಂದ ಪರಿಹಾರ ನೀಡಿಲ್ಲ. ಹಿಂದಿನ ಬಿಜೆಪಿ ಸರ್ಕಾರ ಪ್ರವಾಹ ಹಾನಿಗೆ ಪರಿಹಾರ ನೀಡಿದೆ. ಕಾಂಗ್ರೆಸ್‌ ಸರ್ಕಾರವೂ ತನ್ನ ಪಾಲಿನ ಪರಿಹಾರ ನೀಡಲಿ ಎಂದು ವಿಧಾನಸಭೆಯ ಪ್ರತಿಪ್ಷಕ ನಾಯಕ ಆರ್‌. ಅಶೋಕ್‌ ಆಕ್ರೋಶವನ್ನು ಹೊರಹಾಕಿದ್ದಾರೆ.


ಬೆಂಗಳೂರು: ಬರ ಘೋಷಣೆಯನ್ನೇ (Karnataka Drought) ತಡ ಮಾಡಿರುವ ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದ ಕಾಂಗ್ರೆಸ್‌ ಸರ್ಕಾರ (Congress Government) ಸಂಪೂರ್ಣ ದಿವಾಳಿಯಾಗಿ ಮೂರು ತಿಂಗಳು ತಡವಾಗಿ ಬರ ಘೋಷಣೆ ಮಾಡಿದೆ. ಈಗ ಹಿಂಗಾರು ಬರಗಾಲದ ಘೋಷಣೆಯನ್ನೂ ಮಾಡಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಆಕ್ರೋಶ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಬರಗಾಲದ ನಿರ್ವಹಣೆಯಲ್ಲಿ ವಿಫಲವಾಗಿರುವುದನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಟೀಕಿಸಿದ್ದರು. ಈ ಕುರಿತು ಪತ್ರಿಕೆಗಳಲ್ಲೂ ಅನೇಕ ವರದಿಗಳು ಬಂದಿವೆ. ಆದರೆ, ಬರವನ್ನು ಘೋಷಣೆ ಮಾಡಲು ಸರ್ಕಾರ ಮೂರು ತಿಂಗಳು ತೆಗೆದುಕೊಂಡಿದೆ. ಮಾಧ್ಯಮಗಳಲ್ಲಿ ವರದಿ ಬಂದಾಗ, ರೈತರು ಪ್ರತಿಭಟಿಸಿದಾಗಲೇ ಬರಗಾಲ ಘೋಷಿಸಿದ್ದರೆ ಕೇಂದ್ರ ಸರ್ಕಾರದ ತಂಡ ಬೇಗ ಬಂದು ಪರಿಶೀಲನೆ ಮಾಡುತ್ತಿತ್ತು. ಬರ ಘೋಷಣೆಯನ್ನೇ ತಡ ಮಾಡಿ ಈಗ ಕೇಂದ್ರದ ತಪ್ಪು ಎನ್ನುವ ರಾಜ್ಯ ಸರ್ಕಾರಕ್ಕೆ ಮಾನ ಇಲ್ಲ ಎಂದು ದೂರಿದರು.

First Published on Vistara News.

Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!