Lok Sabha Election 2024: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರ ಖಾತೆಗೆ ವರ್ಷಕ್ಕೆ 1.24 ಲಕ್ಷ ರೂ. ಜಮೆ: ರಾಹುಲ್ ಗಾಂಧಿ
Lok Sabha Election 2024: ಮಹಾಲಕ್ಷ್ಮಿ ಯೋಜನೆಯಡಿ ಪ್ರತಿ ಮನೆಯ ಯಜಮಾನಿಗೆ ಮಾಸಿಕವಾಗಿ 8.5 ಸಾವಿರ ರೂಪಾಯಿ ಪ್ಲಸ್ ರಾಜ್ಯ ಸರ್ಕಾರದ 2 ಸಾವಿರ ರೂಪಾಯಿಯಂತೆ ಒಟ್ಟು 10,500 ರೂಪಾಯಿಯನ್ನು ಜಮೆ ಮಾಡಲಾಗುವುದು. ಪುರುಷರು 8 ಗಂಟೆ ಕೆಲಸ ಮಾಡಿದರೆ ಮಹಿಳೆಯರು 16 ಗಂಟೆ ಕೆಲಸ ಮಾಡುತ್ತಾರೆ. ಈ ಕಾರಣಕ್ಕೆ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ವರ್ಷಕ್ಕೆ 1 ಲಕ್ಷ ರೂ. ಕೊಡುವುದಾಗಿ ತೀರ್ಮಾನ ಮಾಡಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದರು.
ಮಂಡ್ಯ: ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬದ ಯಜಮಾನಿಯರಿಗೆ ಮಹಾಲಕ್ಷ್ಮಿ ಯೋಜನೆಯಡಿ ವರ್ಷಕ್ಕೆ 1 ಲಕ್ಷ ರೂಪಾಯಿಯನ್ನು ಕೊಡುತ್ತದೆ. ಇದರ ಹೊರತಾಗಿ ಕಾಂಗ್ರೆಸ್ ಸರ್ಕಾರ ನೀಡುತ್ತಿರುವ 24 ಸಾವಿರ ರೂಪಾಯಿ ಸಹ ಮುಂದುವರಿಯಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಘೋಷಣೆ ಮಾಡಿದರು.
ಮಂಡ್ಯದಲ್ಲಿ ಬುಧವಾರ ಏರ್ಪಡಿಸಲಾಗಿರುವ ಕಾಂಗ್ರೆಸ್ ಪ್ರಜಾಧ್ವನಿ- 2 ಸಮಾವೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಪ್ರಚಾರ ಮಾಡಿದ ರಾಹುಲ್ ಗಾಂಧಿ, ಮಹಾಲಕ್ಷ್ಮಿ ಯೋಜನೆಯಡಿ ಪ್ರತಿ ಮನೆಯ ಯಜಮಾನಿಗೆ ಮಾಸಿಕವಾಗಿ 8.5 ಸಾವಿರ ರೂಪಾಯಿ ಪ್ಲಸ್ ರಾಜ್ಯ ಸರ್ಕಾರದ 2 ಸಾವಿರ ರೂಪಾಯಿಯಂತೆ ಒಟ್ಟು 10,500 ರೂಪಾಯಿಯನ್ನು ಜಮೆ ಮಾಡಲಾಗುವುದು. ಪುರುಷರು 8 ಗಂಟೆ ಕೆಲಸ ಮಾಡಿದರೆ ಮಹಿಳೆಯರು 16 ಗಂಟೆ ಕೆಲಸ ಮಾಡುತ್ತಾರೆ. ಈ ಕಾರಣಕ್ಕೆ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ವರ್ಷಕ್ಕೆ 1 ಲಕ್ಷ ರೂ. ಕೊಡುವುದಾಗಿ ತೀರ್ಮಾನ ಮಾಡಿದ್ದೇವೆ ಎಂದು ಹೇಳಿದರು.
First Published on Vistara News.

Comments
Post a Comment