Lok Sabha Election 2024: ನಾಳೆಯೇ ಬಿಜೆಪಿ ಸೇರುತ್ತಿದ್ದೇನೆ; ನಿಮ್ಮ ಆಶೀರ್ವಾದ ಇರಲಿ ಎಂದು ಟ್ವೀಟ್ ಮಾಡಿದ ಸುಮಲತಾ
Lok Sabha Election 2024: ಹಲವು ತಿಂಗಳಿನಿಂದ ಕುತೂಹಲಕ್ಕೆ ಕಾರಣವಾಗಿದ್ದ ಸುಮಲತಾ ಅಂಬರೀಶ್ ಅವರ ನಡೆ ಕೊನೆಗೂ ಬಹಿರಂಗವಾಗಿದೆ. ಬಿಜೆಪಿ ಸೇರ್ಪಡೆಯಾಗುತ್ತಿರುವ ಬಗ್ಗೆ ಅವರು ಸುದ್ದಿಗೋಷ್ಠಿ ಕರೆದು ಘೋಷಣೆ ಮಾಡಿದ್ದರು. ಈಗ ಅವರ ಪಕ್ಷ ಸೇರ್ಪಡೆ ದಿನಾಂಕವು ಘೋಷಣೆಯಾಗಿದೆ. ಬಿಜೆಪಿಯ ಹಲವು ನಾಯಕರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ.
ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ (Sumalatha Ambareesh) ಅವರು ಸ್ಪರ್ಧೆಯಿಂದ ಹಿಂದೆ ಸರಿದು, ಬಿಜೆಪಿ ಸೇರ್ಪಡೆ ಬಗ್ಗೆ ಬುಧವಾರವಷ್ಟೇ ಘೋಷಿಸಿದ್ದರು. ಈಗ ಅವರ ಪಕ್ಷ ಸೇರ್ಪಡೆ ದಿನಾಂಕವೂ ನಿಗದಿಯಾಗಿದೆ. ನಾಳೆ (ಶುಕ್ರವಾರ) ಬೆಳಗ್ಗೆ ಬೆಳಗ್ಗೆ 11 ಗಂಟೆಗೆ ಬೆಂಬಲಿಗರೊಂದಿಗೆ ಬಿಜೆಪಿಯನ್ನು ಸೇರುತ್ತಿರುವುದಾಗಿ ಸುಮಲತಾ ಅಂಬರೀಶ್ ಟ್ವೀಟ್ ಮಾಡಿ ಹೇಳಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರ್ಪಡೆಗೆ ಮುಹೂರ್ತ ನಿಗದಿಯಾಗಿದೆ. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ, ಆರ್. ಅಶೋಕ್, ಮಾಜಿ ಸಿಎಂ ಬಿ.ಎಸ್. ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಮ್ಮುಖದಲ್ಲಿ ಸೇರ್ಪಡೆಯಾಗಲಿದ್ದಾರೆ.

Comments
Post a Comment