Lok Sabha Election 2024: ಎಚ್‌ಡಿಕೆ ಬೆಂಗಳೂರು ಗ್ರಾಮಾಂತರದಲ್ಲೇಕೆ ಸ್ಪರ್ಧಿಸಲಿಲ್ಲ; ಸೋಲಿನ ಭಯವೇ?: ಸಿಎಂ ಪ್ರಶ್ನೆ

 Lok Sabha Election 2024: ನರೇಂದ್ರ ಮೋದಿ ಅವರು ನುಡಿದಂತೆ ನಡೆದುಕೊಳ್ಳಲಿಲ್ಲ. ಪ್ರತಿಯೊಬ್ಬರ ಖಾತೆಗೆ 15 ಕೋಟಿ ರೂಪಾಯಿಯನ್ನು ಹಾಕುತ್ತೇವೆ ಎಂದು ಹೇಳಿದ್ದರು. ಯಾರ ಖಾತೆಗೂ ಹಣ ಬರಲಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡುತ್ತೇನೆ ಎಂದು ಹೇಳಿದ್ದರು. ಅದೂ ಆಗಲಿಲ್ಲ. ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲಗಳ ದರ ಹೆಚ್ಚಾಗಿದ್ದು ಬಿಟ್ಟರೆ ಅಚ್ಚೇ ದಿನ್‌ ಬರಲೇ ಇಲ್ಲ. ಆದರೆ, ನಾವು ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ಘೋಷಣೆ ಮಾಡಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ ಕೂಡಲೇ ಜಾರಿ ಮಾಡಿದೆವು. ಈ ಮೂಲಕ ರಾಜ್ಯದ ಜನತೆಗೆ ಬೆಂಬಲವಾಗಿ ನಿಂತಿದ್ದೇವೆ ಎಂದು ರಾಹುಲ್‌ ಗಾಂಧಿ ಹೇಳಿದರು.


ಮಂಡ್ಯ: ಈ ಹಿಂದಿನ ಲೋಕಸಭಾ ಚುನಾವಣೆಯಲ್ಲಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ಮುಖ್ಯಮಂತ್ರಿ ಆಗಿದ್ದರು. ಹೀಗಾಗಿ ಅವರ ಮಗ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಅವರನ್ನು ಕಣಕ್ಕಿಳಿಸಿದ್ದರು. ಆದರೆ, ಅವರಿಗೆ ಸೋಲಾಯಿತು. ಸುಮಲತಾ ಅಂಬರೀಶ್‌ (Sumalatha Amabareesh) ಗೆದ್ದಿದ್ದರು. ಇಂದು ಅವರು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿಯೇ (Bangalore Rural Lok Sabha constituency) ಸ್ಪರ್ಧೆ ಮಾಡಬಹುದಿತ್ತು. ಆದರೆ, ಅಲ್ಲಿ ಸೋಲುವ ಭಯದಿಂದ ಇಲ್ಲಿಗೆ ಬಂದು ಸ್ಪರ್ಧೆ ಮಾಡುತ್ತಿದ್ದಾರೆ. ಅವರನ್ನು ಈ ಚುನಾವಣೆಯಲ್ಲಿ (Lok Sabha Election 2024) ಮಂಡ್ಯದ ಜನತೆ ಸೋಲಿಸಿ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಕರೆ ನೀಡಿದರು.

ಮಂಡ್ಯದಲ್ಲಿ ಬುಧವಾರ ಏರ್ಪಡಿಸಲಾಗಿರುವ ಕಾಂಗ್ರೆಸ್ ಪ್ರಜಾಧ್ವನಿ- 2 ಸಮಾವೇಶದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಪರ ಪ್ರಚಾರ ಮಾಡಿದ ಸಿಎಂ ಸಿದ್ದರಾಮಯ್ಯ, ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಸೋಲಿಸುವ ಮೂಲಕ ತಕ್ಕ ಉತ್ತರ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

First Published on Vistara News.

Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!