Lok Sabha Election: 73 ವರ್ಷಗಳಲ್ಲೇ ಕಡಿಮೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧೆ; ಏಕಿಂಥಾ ದುಸ್ಥಿತಿ?
Lok Sabha Election: 27 ರಾಜ್ಯಗಳು ಹಾಗೂ 8 ಕೇಂದ್ರಾಡಳಿತ ಪ್ರದೇಶಗಳು ಸೇರಿ ಕಾಂಗ್ರೆಸ್ ಇದುವರೆಗೆ 278 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಉತ್ತರ ಪ್ರದೇಶ, ಹರಿಯಾಣ, ಬಿಹಾರ, ಪಂಜಾಬ್, ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ ಸೇರಿ ಹೆಚ್ಚೆಂದರೆ ಇನ್ನೂ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಹಾಗಾಗಿ, ಇತಿಹಾಸದಲ್ಲಿಯೇ ಕಾಂಗ್ರೆಸ್ ಅತ್ಯಂತ ಕಡಿಮೆ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಇದಕ್ಕೆ ನಾಯಕತ್ವ ಕೊರತೆ, ದೇಶದಲ್ಲಿ ಕಾಂಗ್ರೆಸ್ ಕಳೆಗುಂದಿರುವುದು, ಪ್ರಾದೇಶಿಕ ಪಕ್ಷಗಳ ಪ್ರಾಬಲ್ಯವೇ ಕಾರಣ ಎಂದು ಹೇಳಲಾಗುತ್ತಿದೆ.
ನವದೆಹಲಿ: ಅಸಮರ್ಥ ನಾಯಕತ್ವ, ನಾಯಕತ್ವದಲ್ಲಿಯೇ ಗೊಂದಲ, ನರೇಂದ್ರ ಮೋದಿ (Narendra Modi) ಅಲೆ ಸೇರಿ ಹಲವು ಕಾರಣಗಳಿಂದಾಗಿ ಕಳೆದ 10 ವರ್ಷಗಳಲ್ಲಿ ದೇಶಾದ್ಯಂತ ಕಾಂಗ್ರೆಸ್ ಹೊಳಪು ಕಳೆದುಕೊಂಡಿದೆ. ದೇಶದ ಅತ್ಯಂತ ಹಳೆಯ ಪಕ್ಷ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಪಕ್ಷ ಎಂದು ಕಾಂಗ್ರೆಸ್ ನಾಯಕರು ಹೇಳಿಕೊಂಡರೂ, ಕಾಂಗ್ರೆಸ್ (Congress) ದುಸ್ಥಿತಿಗೆ ಸಿಲುಕಿದೆ. ದೇಶದ ಮೊದಲ ಲೋಕಸಭೆ ಚುನಾವಣೆ (Lok Sabha Election) ನಡೆದ 1951-52ರ ಬಳಿಕ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಅತ್ಯಂತ ಕಡಿಮೆ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವುದೇ ಇದಕ್ಕೆ ಸಾಕ್ಷಿಯಾಗಿದೆ.
ಹೌದು, ಈ ಬಾರಿ ಕಾಂಗ್ರೆಸ್ 300ಕ್ಕಿಂತ ಕಡಿಮೆ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ ಎಂದು ಹೇಳಲಾಗುತ್ತಿದೆ. 27 ರಾಜ್ಯಗಳು ಹಾಗೂ 8 ಕೇಂದ್ರಾಡಳಿತ ಪ್ರದೇಶಗಳು ಸೇರಿ ಕಾಂಗ್ರೆಸ್ ಇದುವರೆಗೆ 278 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಉತ್ತರ ಪ್ರದೇಶ, ಹರಿಯಾಣ, ಬಿಹಾರ, ಪಂಜಾಬ್, ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ ಸೇರಿ ಹೆಚ್ಚೆಂದರೆ ಇನ್ನೂ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಅಲ್ಲಿಗೆ, ಕಾಂಗ್ರೆಸ್ ಕಳೆದ 73 ವರ್ಷಗಳಲ್ಲಿಯೇ ಸಾರ್ವತ್ರಿಕ ಚುನಾವಣೆಯಲ್ಲಿ ಕಡಿಮೆ ಕ್ಷೇತ್ರಗಳಲ್ಲಿ ಸ್ಪರ್ಧಿಸಿದಂತಾಗಲಿದೆ.

Comments
Post a Comment