Lok Sabha Election: ಮೋದಿಯಿಂದ ಮಧ್ಯಮ ವರ್ಗದ ಬದುಕು ಹೈರಾಣಾಗಿತ್ತು, ನಾವು ಗ್ಯಾರಂಟಿ ಮೂಲಕ ಸ್ಪಂದಿಸಿದ್ದೇವೆ: ಸಿಎಂ
Lok Sabha Election 2024: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕೋಣನಕುಂಟೆ ಕ್ರಾಸ್‌ನಲ್ಲಿ ನಡೆದ ಬೃಹತ್ ಪ್ರಜಾಧ್ವನಿ -2 ಜನಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.
ಬೆಂಗಳೂರು: ಬೆಲೆ ಏರಿಕೆ ತಡೆಯುವುದಾಗಿ ಭಾರತೀಯರನ್ನು ನಂಬಿಸಿ ಅಧಿಕಾರಕ್ಕೆ ಬಂದ ಮೋದಿಯವರು ವಿಪರೀತ ಬೆಲೆ ಏರಿಕೆ ಮಾಡಿದ್ದರಿಂದ ಮಧ್ಯಮ ವರ್ಗದ ಬದುಕು ಹೈರಾಣಾಗಿತ್ತು. ನಾವು ಗ್ಯಾರಂಟಿಗಳ ಮೂಲಕ ಸ್ಪಂದಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕೋಣನಕುಂಟೆ ಕ್ರಾಸ್‌ನಲ್ಲಿ ನಡೆದ ಬೃಹತ್ ಪ್ರಜಾಧ್ವನಿ -2 ಜನಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬೆಲೆ ಏರಿಕೆ ಭಾರತೀಯರ ಶತ್ರು. ನಾನು ಪ್ರಧಾನಿಯಾದರೆ ಬೆಲೆ ಏರಿಕೆ ತಡೆಯುವುದಾಗಿ ಇಡೀ ಭಾರತೀಯರನ್ನು ಮೋದಿ ನಂಬಿಸಿದ್ದರು. ಆದರೆ ಇದೇ ಮೋದಿ ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ ಸೇರಿ ಎಲ್ಲದರ ಬೆಲೆಯನ್ನೂ ಗಗನಕ್ಕೆ ಏರಿಸಿದರು ಎಂದು ಬೆಲೆ ಏರಿಕೆಯ ಪಟ್ಟಿ ನೀಡಿದರು.
First Published on Vistara News.

Comments
Post a Comment