Modi in Karnataka: ಟ್ಯಾಕ್ಸ್ ಸಿಟಿ ಬೆಂಗಳೂರನ್ನು ಟ್ಯಾಂಕರ್ ಸಿಟಿ ಮಾಡಿದ ಸರ್ಕಾರ, ಹೆಣ್ಣು ಮಕ್ಕಳ ಮೇಲೂ ಹಲ್ಲೆ: ಮೋದಿ ವಾಗ್ದಾಳಿ

 Modi in Karnataka: ಬೆಂಗಳೂರು ಸೇರಿದಂತೆ ಕರ್ನಾಟಕದ ಎಲ್ಲ ಕಡೆ ಬಜೆಟ್ ಕಡಿತ ಮಾಡಲಾಗುತ್ತಿದೆ. ಅಭಿವೃದ್ಧಿ ಗೌಣವಾಗಿದೆ. ಎಲ್ಲೆಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಜನರ ಸಮಸ್ಯೆ ಬಗ್ಗೆ ಈ ಸರ್ಕಾರ ಗಮನ ಕೊಡುತ್ತಿಲ್ಲ. ಕರ್ನಾಟಕದಲ್ಲಿ ಹೆಣ್ಣು ಮಕ್ಕಳ ಮೇಲೆ ಹಲ್ಲೆ ಆಗುತ್ತಿದೆ. ಭಜನೆ ಮಾಡಿದರೂ ಹಲ್ಲೆ ಮಾಡಲಾಗುತ್ತಿದೆ. ಬೀದಿಗಳಲ್ಲಿ ಬಾಂಬ್‌ ಸ್ಫೋಟಗೊಳ್ಳುತ್ತಿದೆ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದರು.


ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ (Karnataka Congress Government) ಅಧಿಕಾರಕ್ಕೆ ಬಂದು ಕೆಲವೇ ತಿಂಗಳಲ್ಲಿ ಬೆಂಗಳೂರಿನ ಪರಿಸ್ಥಿತಿಯನ್ನು ಹಾಳು ಮಾಡಿದೆ. ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಆಕ್ರೋಶವನ್ನು ಹೊರಹಾಕಿದರು. ಬೆಂಗಳೂರಿನಲ್ಲಿ ಏರ್ಪಡಿಸಲಾಗಿದ್ದ ಬೃಹತ್‌ ಸಮಾವೇಶದಲ್ಲಿ ಪಾಲ್ಗೊಂಡ ಮೋದಿ (Modi in Karnataka) ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಬಿಜೆಪಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬೆಂಗಳೂರು ಸೇರಿದಂತೆ ಕರ್ನಾಟಕದ ಎಲ್ಲ ಕಡೆ ಬಜೆಟ್ ಕಡಿತ ಮಾಡಲಾಗುತ್ತಿದೆ. ಅಭಿವೃದ್ಧಿ ಗೌಣವಾಗಿದೆ. ಎಲ್ಲೆಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಜನರ ಸಮಸ್ಯೆ ಬಗ್ಗೆ ಈ ಸರ್ಕಾರ ಗಮನ ಕೊಡುತ್ತಿಲ್ಲ. ಕರ್ನಾಟಕದಲ್ಲಿ ಹೆಣ್ಣು ಮಕ್ಕಳ ಮೇಲೆ ಹಲ್ಲೆ ಆಗುತ್ತಿದೆ. ಭಜನೆ ಮಾಡಿದರೂ ಹಲ್ಲೆ ಮಾಡಲಾಗುತ್ತಿದೆ. ಬೀದಿಗಳಲ್ಲಿ ಬಾಂಬ್‌ ಸ್ಫೋಟಗೊಳ್ಳುತ್ತಿದೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

ನಾವು ಅಧಿಕಾರಕ್ಕೆ ಬರುವಾಗ ಭಾರತವು ಆರ್ಥಿಕವಾಗಿ ಭಾರಿ ಹಿಂದಿತ್ತು. ಈಗ ಜಾಗತಿಕವಾಗಿ ಆರ್ಥಿಕ ಪ್ರಗತಿಯಲ್ಲಿ 5ನೇ ಸ್ಥಾನದಲ್ಲಿದ್ದೇವೆ. ಇದಕ್ಕೆ ಕಾರಣವಾಗಿದ್ದು, ನಿಮ್ಮ ಮತ. ಕಳೆದ 10 ವರ್ಷದಲ್ಲಿ ಭಾರತವು ಸಾಕಷ್ಟು ಸುಧಾರಣೆಯನ್ನು ಕಂಡಿದ್ದಲ್ಲದೆ, ಆರ್ಥಿಕ ಕ್ರಾಂತಿಯಾಗಿದೆ. ಈಗ ಭಾರತವು ಹಿಂಬಾಲಿಸುವ ದೇಶವಾಗಿ ಉಳಿದಿಲ್ಲ. 2014 ಹಾಗೂ 2019ರಲ್ಲಿ ಪೂರ್ಣ ಬಹುಮತಗಳೊಂದಿಗೆ ಭರ್ಜರಿ ಗೆಲುವನ್ನು ನಮಗೆ ಕೊಟ್ಟಿದ್ದೀರಿ. ಈ ಬಾರಿಯೂ ಅಂಥದ್ದೇ ಗೆಲುವನ್ನು ನೀವು ಕೊಡುತ್ತೀರಿ ಎಂಬ ವಿಶ್ವಾಸ ನನಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

First Published on Vistara News.

Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!