Yaduveer: ಬಿಜೆಪಿಯ ಯದುವೀರ್‌ ಆಸ್ತಿ ಮೌಲ್ಯ 4.99 ಕೋಟಿ ರೂ.; ಇವರ ಬಳಿ ಸ್ವಂತ ಕಾರೂ ಇಲ್ಲ

 Yaduveer: ಮೈಸೂರು ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಅವರು ನಾಮಪತ್ರ ಸಲ್ಲಿಕೆ ಜತೆಗೆ ಆಸ್ತಿಯನ್ನೂ ಘೋಷಣೆ ಮಾಡಿದ್ದಾರೆ. ಇವರು ಸ್ವಂತ ವಾಹನ ಹೊಂದಿಲ್ಲ. ಯಾವುದೇ ಸಾಲ ಇಲ್ಲ. ಹಾಗೆಯೇ, ಯಾವುದೇ ರೀತಿಯ ಸ್ಥಿರಾಸ್ಥಿಯನ್ನೂ ಹೊಂದಿಲ್ಲ ಎಂಬುದಾಗಿ ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾರೆ.


ಬೆಂಗಳೂರು: ಲೋಕಸಭೆ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಮೈಸೂರು ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ (Yaduveer) ಅವರು ಜ್ಯೋತಿಷಿಗಳ ಸೂಚನೆಯಂತೆ ನಾಮಪತ್ರ ಸಲ್ಲಿಸಿದರು. ತಾಯಿ ಪ್ರಮೋದಾದೇವಿ ಒಡೆಯರ್, ಶಾಸಕ‌ ಶ್ರೀವತ್ಸ ಜತೆ ಸೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದರು. ಏಪ್ರಿಲ್‌ 3ರಂದು ಬೃಹತ್‌ ರ‍್ಯಾಲಿ ಮೂಲಕ ಅವರು ನಾಮಪತ್ರ ಸಲ್ಲಿಸಿದ್ದಾರೆ. ಸೋಮವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇನ್ನು, ಯದುವೀರ್‌ ಅವರು ಆಸ್ತಿಯ ಕುರಿತ ಅಫಿಡವಿಟ್‌ಅನ್ನೂ (Affidavit) ಚುನಾವಣಾ ಆಯೋಗಕ್ಕೆ (Election Commission) ನೀಡಿದ್ದು, ಅವರ ಬಳಿ ನಗದು ಸೇರಿ ಒಟ್ಟು 4.99 ಕೋಟಿ ರೂ. ಆಸ್ತಿ ಇದೆ ಎಂದು ಉಲ್ಲೇಖಿಸಲಾಗಿದೆ.

ಹೌದು, ಮೈಸೂರಿನ ರಾಜಮನೆತನಕ್ಕೆ ಸೇರಿದರೂ ಯದುವೀರ್‌ ಅವರು 4,99,59,303 ರೂ. ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ಇನ್ನು ಯದುವೀರ್‌ ಅವರ ಪತ್ನಿ 1,04,25,000 ಮೌಲ್ಯದ ಆಸ್ತಿ ಹೊಂದಿದ್ದಾರೆ ಎಂಬುದಾಗಿ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ. ಇನ್ನು ಇವರ ಪುತ್ರನ (Dependent) ಹೆಸರಿನಲ್ಲಿ 3.63 ಕೋಟಿ ರೂ. ಆಸ್ತಿ ಇದೆ. ಯದುವೀರ್‌ ಅವರ ಕುಟುಂಬದಲ್ಲಿ (ಪತ್ನಿ ಹಾಗೂ ಪುತ್ರ) ಯಾರೂ ಸಾಲ ಹೊಂದಿಲ್ಲ ಎಂಬುದಾಗಿ ಯದುವೀರ್‌ ಅವರು ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾರೆ.

First Published on Vistara News.

Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!