Posts

Showing posts from May, 2024

Prajwal Revanna Case: ನಾನು ಹೊರಬಂದ್ರೆ ಸರ್ಕಾರ ಪತನ ಎಂದ ದೇವರಾಜೇಗೌಡ; ಹಾಗಾದ್ರೆ ಜೈಲಲ್ಲೇ ಇರ್ತಾರೆ ಎಂದ ಪರಮೇಶ್ವರ್‌

Image
  Prajwal Revanna Case : ಡಿಸಿಎಂ ಡಿಕೆಶಿ ವಿರುದ್ಧ ವಕೀಲ ದೇವರಾಜೇಗೌಡ ಆರೋಪಗಳ ಬಗ್ಗೆ ತುಮಕೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರತಿಕ್ರಿಯಿಸಿದ್ದಾರೆ. ತುಮಕೂರು:  ದೇಶಾದ್ಯಂತ ಸಂಚಲನ ಮೂಡಿಸಿರುವ  ಹಾಸನ ಪೆನ್‌ಡ್ರೈವ್‌ ಪ್ರಕರಣದ  (Prajwal Revanna Case) ಹಿಂದಿನ ಮಾಸ್ಟರ್‌ ಮೈಂಡ್‌ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ ಎಂದು ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿದ್ದಾರೆ. ಜತೆಗೆ ಪ್ರಕರಣದಲ್ಲಿ ಶಾಮೀಲಾಗಲು 100 ಕೋಟಿ ರೂ. ಆಫರ್‌ ನೀಡಿದ್ದರು ಎಂದು ಹೇಳಿದ್ದಾರೆ. ಇನ್ನು ನಾನು ಹೊರಗೆ ಬಂದರೆ ಸರ್ಕರ ಪತನವಾಗುತ್ತದೆ ಎಂಬ ದೇವರಾಜೇಗೌಡ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಅವರು, ಹಾಗಾದರೆ ಅವರು ಜೇಲಲ್ಲೇ ಇರಬೇಕಾಗುತ್ತೆ ಎಂದು ಹೇಳಿರುವುದು ಕಂಡುಬಂದಿದೆ. ಡಿಕೆಶಿ ವಿರುದ್ಧ ವಕೀಲ ದೇವರಾಜೇಗೌಡ ಆರೋಪಗಳ ಬಗ್ಗೆ ನಗರದಲ್ಲಿ ಪ್ರತಿಕ್ರಿಯಿಸಿರುವ ಅವರು, ಆರೋಪಗಳ ಸಾಧಕ ಬಾಧಕಗಳನ್ನು ನೋಡಿ ಎಸ್‌ಐಟಿ ತನಿಖೆ ಮಾಡುತ್ತಾರೆ ಎಂದು ತಿಳಿಸಿದ್ದಾರೆ. ಇನ್ನು ನಾನು ಹೊರಗೆ ಬಂದ್ರೆ ಸರ್ಕಾರ ಪತನ ಆಗುತ್ತೆ ಎಂಬ ದೇವರಾಜೇಗೌಡ ಹೇಳಿಕೆಗೆ ಪ್ರತಿಕ್ರಿಯಿಸಿ, ಹಾಗಾದ್ರೆ ಅವರು ಅಲ್ಲೇ ಇರಬೇಕಾಗುತ್ತೆ ಎಂದು ಮುಗುಳ್ನಗುವ ಮೂಲಕ ಪರೋಕ್ಷವಾಗಿ ಅವರು ಜೈಲಲ್ಲೇ ಇರಬೇಕಾಗುತ್ತದೆ ಎಂದು ಹೇಳಿದ್ದಾರೆ. First Published on  Vistara News .

PM Narendra Modi: “ಮೊದಲ 100 ದಿನಗಳ ಬ್ಲೂಪ್ರಿಂಟ್‌ ರೆಡಿ; ಹೆಚ್ಚುವರಿ 25 ದಿನ ಯುವಕರಿಗೆ ಮೀಸಲು”- ಪ್ರಧಾನಿ ಮೋದಿ

Image
  PM Narendra Modi : ಪ್ರಧಾನಿ ಮೋದಿ ಕಳೆದೆರಡು ಬಾರಿಯಂತೆ ಈ ಬಾರಿ ಮೊದಲ 100 ದಿನಗಳ ಯೋಜನೆಗಳನ್ನು ಕೈಗೆತ್ತಿಕೊಂಡಿದ್ದಾರೆ. ಈ ಬಾರಿ ಯುವಕರನ್ನು ಗುರಿಯಾಗಿಸಿಯೇ ಯೋಜನೆಯನ್ನು ಕೈಗೆತ್ತಿಕೊಂಡಿದ್ದು ಇದನ್ನು ಹೆಚ್ಚುವರಿ 25 ದಿನಗಳವರೆಗೆ ವಿಸ್ತರಿಸಲಾಗುತ್ತದೆ. ಈ 125 ದಿನಗಳವರೆಗೆ ಮೊದಲ ಬಾರಿಗೆ ಮತದಾನ ಮಾಡಿದವರು, ಯುವಜನತೆಯನ್ನು ಗುರಿಯಾಗಿಸಿ ವಿವಿಧ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಕನಸಿನ ಯೋಜನೆಯಾಗಿರುವ ವಿಕ್ಷಿತ್‌ ಭಾರತ್‌ಗೆ ಯುವಕರು ತಮ್ಮ ಹೊಸ ಐಡಿಯಾಗಳ ಮೂಲಕ ಕೊಡುಗೆ ನೀಡಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ. ನವದೆಹಲಿ:  ಲೋಕಸಭೆ ಚುನಾವಣೆ( Lok Sabha Election 2024 )ಯ ನಾಲ್ಕನೇ ಹಂತದ ಮತದಾನ ಈಗಾಗಲೇ ಪೂರ್ಣಗೊಂಡಿದೆ. ಇನ್ನು ಮೂರು ಹಂತಗಳ ಮತದಾನ ಬಾಕಿ ಇರುವಾಗಲೇ ಪ್ರಧಾನಿ ನರೇಂದ್ರ ಮೋದಿ( PM Narendra Modi ) ಮೂರನೇ ಬಾರಿಗೆ ಗದ್ದುಗೆ ಏರುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅದಷ್ಟೇ ಅಲ್ಲದೇ ಅಧಿಕಾರಕ್ಕೆ ಬಂದ ಕೂಡಲೇ ಮೊದಲ ನೂರು ದಿನಗಳ ಯೋಜನೆ ನೀಲನಕ್ಷೆಯನ್ನು ಬಹಿರಂಗಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ತಮ್ಮ ಮೊದಲ 100 ದಿನಗಳ ಯೋಜನೆ ಬಗ್ಗೆ ಪ್ರಸ್ತಾಪಿಸಿದ್ದು, ಈ ಬಾರಿ ಯುವಕರನ್ನೇ ಗುರಿಯನ್ನಾಗಿಸಿ ಯೋಜನೆ ರೂಪಿಸಾಗುತ್ತದೆ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ ಕಳೆದೆರಡು ಬಾರಿಯಂತೆ ಈ ಬಾರಿ ಮೊದಲ 100 ದಿನಗಳ ಯೋಜನೆಗಳನ್...

PM Narendra Modi: ಬುಲ್ಡೋಜರ್‌ ಹೇಗೆ ಬಳಸಬೇಕೆಂಬುದನ್ನು ಯೋಗಿಯಿಂದ ಕಲಿಯಬೇಕು: ಪ್ರಧಾನಿ ಮೋದಿ

Image
  PM Narendra Modi :ಉತ್ತರಪ್ರದೇಶದಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಮತ್ತು ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ರಾಮಲಲ್ಲಾ ಮತ್ತೆ ಟೆಂಟ್‌ನಲ್ಲಿ ಕೂರಬೇಕಾದೀತು. ಏಕೆಂದರೆ ಅವರು ಬುಲ್ಡೋಜರ್‌ ಮೂಲಕ ರಾಮಮಂದಿರವನ್ನು ಕೆಡವುತ್ತಾರೆ. ಬುಲ್ಡೋಜರ್‌ ಅನ್ನು ಎಲ್ಲಿ ಬಳಸಬೇಕು ಅಥವಾ ಎಲ್ಲಿ ಬಳಸಬಾರದು ಎಂಬುದನ್ನು ಯೋಗಿಯಿಂದ ಕಲಿಯಬೇಕು. ಒಂದೆಡೆ ದೇಶದ ಪ್ರಗತಿಗಾಗಿ ಎನ್‌ಡಿಎ ಶ್ರಮಿಸುತ್ತಿದೆ. ಮತ್ತೊಂದೆಡೆ ಇಂಡಿಯಾ ಒಕ್ಕೂಟ ದೇಶದಲ್ಲಿ ಅಶಾಂತಿ ಹುಟ್ಟಿಸಲು ಯತ್ನಿಸುತ್ತಿದೆ ಎಂದು ಕಿಡಿ ಕಾರಿದ್ದಾರೆ. ನವದೆಹಲಿ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್‌(Yogi Adityanath) ಬುಲ್ಡೋಜರ್‌ ಬಾಬಾ ಎಂದೇ ಜನಪ್ರಿಯರಾದವರು. ಕೊಲೆ ದರೋಡೆ, ಅತ್ಯಾಚಾರ, ಗೂಂಡಾಗಿರಿ ಮಾಡುವವರಿಗೆ ಬಿಸಿ ಮುಟ್ಟಿಸಲು ಅವರ ಮನೆಗಳನ್ನೇ ಬುಲ್ಡೋಜರ್‌ ಮೂಲಕ ನೆಲಸಮ ಮಾಡುವ ಮೂಲಕ ಇಡೀ ದೇಶದ ಗಮನ ಸೆಳೆದವರು. ಇದೀಗ ಈ ಬುಲ್ಡೋಜರ್‌ ನೀತಿ ಬಗ್ಗೆ ನರೇಂದ್ರ ಮೋದಿ( PM Narendra Modi ) ಸಾರ್ವಜನಿಕ ಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ. ಕಾಂಗ್ರೆಸ್‌(Congress) ಮತ್ತು ಸಮಾಜವಾದಿ ಪಕ್ಷ(Samajwadi Party) ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮಮಂದಿರದ ಮೇಲೆ ಬುಲ್ಡೋಜರ್‌ ಚಲಾಯಿಸುತ್ತಾರೆ. ಅವರು ಬುಲ್ಡೋಜರ್‌ ಅನ್ನು ಎಲ್ಲಿ ಬಳಸಬೇಕು ಎಂಬುದನ್ನು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್‌ ಅವರಿಂದ ಕಲಿಯಬೇಕು ಎಂದು ಪ್...

SSLC Grace Marks: ಯಾರನ್ನು ಕೇಳಿ ಶೇ. 20 ಗ್ರೇಸ್‌ ಮಾರ್ಕ್ಸ್‌ ಕೊಟ್ಟಿರಿ? ಶಿಕ್ಷಣ ಇಲಾಖೆ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ!

Image
  SSLC Grace Marks : ಗ್ರೇಸ್ ಮಾರ್ಕ್ಸ್ ಹೆಚ್ಚಳಕ್ಕೆ ಸಂಬಂಧಪಟ್ಟಂತೆ ಶಿಕ್ಷಣ ತಜ್ಞರು ಸೇರಿ ಹಲವರಿಂದ ವಿರೋಧಗಳು ಕೇಳಿ ಬರುತ್ತಿವೆ. ಮೊದಲೇ ನಮ್ಮ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪಗಳು ಬರುತ್ತಿವೆ. ಅದರ ಮಧ್ಯೆ ಇದೂ ಒಂದು ಸೇರಿಕೊಂಡಿದೆ. ಗ್ರೇಸ್ ಮಾರ್ಕ್ಸ್ ಕೊಡುವುದು ಅವೈಜ್ಞಾನಿಕ ಎಂಬ ಬಗ್ಗೆ ಅಭಿಪ್ರಾಯಗಳು ಬರುತ್ತಿವೆ. ಹಾಗಾಗಿ ಮುಂದಿನ ಶೈಕ್ಷಣಿಕ ವರ್ಷದಿಂದ ಗ್ರೇಸ್‌ ಮಾರ್ಕ್ಸ್ ಕೊಡುವ ಬಗ್ಗೆ ಮರುಪರಿಶೀಲನೆ ಮಾಡಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಇಲಾಖೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಬೆಂಗಳೂರು:  ಬರ ಪರಿಹಾರ, ಮುಂಗಾರು ಮಳೆ, ಬಿತ್ತನೆ ಬೀಜ, ರಸ ಗೊಬ್ಬರ ವಿತರಣೆ, ಶಿಕ್ಷಣ, ಕಾನೂನು ಸುವ್ಯವಸ್ಥೆ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಚರ್ಚೆ ನಡೆಸಲು ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ ( CM Siddaramaiah ), ಈ ಬಾರಿಯ ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 20 ಗ್ರೇಸ್‌ ಮಾರ್ಕ್ಸ್‌ ( SSLC Grace Marks ) ಕೊಟ್ಟಿದ್ದಕ್ಕೆ ಗರಂ ಆಗಿದ್ದಾರೆ. ಯಾರನ್ನು ಕೇಳಿ ಹೆಚ್ಚುವರಿ ಅಂಕವನ್ನು ಕೊಟ್ಟಿರಿ? ಶಿಕ್ಷಣ ಗುಣಮಟ್ಟ ಕುಸಿದಿದ್ದು ಏಕೆ? ಎಂದು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಯನ್ನು ತರಾಟೆಗೆ ತೆಗೆದುಕೊಂಡರು. ಶಿಕ್ಷಣ ಇಲಾಖೆಗೆ ಸಂಬಂಧಪಟ್ಟಂತೆ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ಸಿದ್ದರಾಮಯ್ಯ, ಎಸ್‌ಎಸ್‌ಎಲ್‌ಸಿಗೆ ಗ್ರೇಸ್‌ ಮಾರ್ಕ್ಸ್‌ ಕೊಟ್ಟಿರುವ...

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Image
  Prajwal Revanna Case : ಈ ಬಗ್ಗೆ ಜರ್ಮನಿ ಮ್ಯೂನಿಕ್ ಏರ್‌ಪೋರ್ಟ್‌ನಿಂದ ವಿಸ್ತಾರ ನ್ಯೂಸ್‌ ಗ್ರೌಂಡ್ ರಿಪೋರ್ಟ್ ಮಾಡಿದ್ದು, ಬೆಂಗಳೂರಿಗೆ ಬರುವ ಫ್ಲೈಟ್‌ನಲ್ಲಿ ಪ್ರಜ್ವಲ್‌ ಹತ್ತಿಲ್ಲ ಎಂಬ ಸಂಗತಿ ಗೊತ್ತಾಗಿದೆ. ಎಲ್ಲ ಪ್ರಯಾಣಿಕರಿಗೆ ಫ್ಲೈಟ್‌ ಹತ್ತಲು ಬೋರ್ಡಿಂಗ್‌ ಕ್ಲೋಸ್‌ ಆಗಿತ್ತು. 3.35ಕ್ಕೆ ಲುಫ್ತಾನ್ಸಾ ಏರ್‌ಲೈನ್ಸ್ LH764 ಟೇಕ್‌ ಆಫ್‌ ಆಗಿದೆ. ಈ ನಡುವೆ ಇನ್ನು ಸಿಬಿಐ ಮೂಲಕ ಇಂಟರ್‌ಪೋಲ್‌ನಿಂದ ಬ್ಲೂ ಕಾರ್ನರ್ ನೋಟಿಸ್‌ ಕೂಡಾ ಜಾರಿ ಮಾಡಲಾಗಿದ್ದು, ಕಾನೂನಿಗೆ ಡೋಂಟ್‌ ಕೇರ್ ಎಂದು ಪ್ರಜ್ವಲ್ ಹೇಳುತ್ತಿದ್ದಾರಾ ಎಂಬ ಅನುಮಾನ ಮೂಡಿದೆ. ಬೆಂಗಳೂರು:  ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ( Prajwal Revanna Case ) ಎಸ್‌ಐಟಿ ಮೋಸ್ಟ್ ವಾಂಟೆಡ್‌ ಲಿಸ್ಟ್‌ನಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ, ಇಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ ಎಂಬುದು ಸುಳ್ಳಾಗಿದೆ. ಅವರು ಜರ್ಮನಿ ಮ್ಯೂನಿಕ್ ಏರ್‌ಪೋರ್ಟ್‌ನ ಲಾಂಜ್‌ನಲ್ಲಿಯೇ ಕಾಣಿಸಿಕೊಂಡಿಲ್ಲ ಎಂಬ ಸಂಗತಿ ಗೊತ್ತಾಗಿದೆ. ಅಲ್ಲದೆ, ಫ್ಲೈಟ್‌ ಟೇಕ್‌ ಆಫ್‌ ಆಗಿದ್ದರೂ ಅವರು ಅವರು ಅತ್ತ ಸುಳಿದಿಲ್ಲ. ಹೀಗಾಗಿ ಸುಮಾರು 3 ಲಕ್ಷ ರೂಪಾಯಿ ಮೌಲ್ಯದ ಟಿಕೆಟ್‌ ಮಾಡಿಸಿಯೂ ಅವರು ವಿಮಾನವನ್ನು ಹತ್ತಿಲ್ಲ ಎಂಬ ಸಂಗತಿ ಗೊತ್ತಾಗಿದೆ. ಈ ಬಗ್ಗೆ ಜರ್ಮನಿ ಮ್ಯೂನಿಕ್ ಏರ್‌ಪೋರ್ಟ್‌ನಿಂದ ವಿಸ್ತಾರ ನ್ಯೂಸ್‌ ಗ್ರೌಂಡ್ ರಿಪೋರ್ಟ್ ಮಾಡಿದ್ದು, ಬೆಂಗಳೂರಿಗೆ ಬರುವ ಫ್ಲೈ...

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!

Image
  Prajwal Revanna Case : ಪ್ರಜ್ವಲ್‌ ರೇವಣ್ಣ ಮೇಲೆ ಕೇಸ್‌ ದಾಖಲಾಗಿ 17 ದಿನವೇ ಗತಿಸಿಹೋಗಿದೆ. ಇನ್ನು ಈ ಕೇಸ್‌ಗೆ ಸಂಬಂಧಿಸಿ ಸಂತ್ರಸ್ತ ಮಹಿಳೆಯನ್ನು ಕಿಡ್ನ್ಯಾಪ್‌ ಮಾಡಿದ ಆರೋಪ ಎದುರಿಸಿ ಎಚ್‌.ಡಿ. ರೇವಣ್ಣ ಜೈಲು ಸೇರಿದ್ದರೂ ಆ ಕಡೆ ಭವಾನಿ ಕಣ್ಣೆತ್ತಿಯೂ ನೋಡಿಲ್ಲ. ಇನ್ನು ಇದೇ ಕೇಸ್‌ ವಿಚಾರವಾಗಿ ಎಸ್ಐಟಿ ಎರಡು ಬಾರಿ ನೋಟಿಸ್‌ ಕೊಟ್ಟರೂ ಡೋಂಟ್‌ ಕೇರ್‌ ಎಂಬಂತೆ ಕುಳಿತುಬಿಟ್ಟಿದ್ದಾರೆ. ಪ್ರಜ್ವಲ್ ರೀತಿಯಲ್ಲಿ ತಾಯಿಯೂ ವಿಚಾರಣೆಗೆ ಬರಲು ಹಿಂದೇಟು ಹಾಕಿದ್ದಾರೆ. ಈ ಎಲ್ಲ ಬೆಳವಣಿಗೆ ಮಧ್ಯೆ ರೇವಣ್ಣ ಅವರಿಗೆ ಜಾಮೀನು ಸಿಕ್ಕರೂ ಖುಷಿ ವ್ಯಕ್ತಪಡಿಸೋಕೆ ಕೂಡಾ ಅವರು ಕಾಣಿಸಿಕೊಳ್ಳಲಿಲ್ಲ. ಇದೆಲ್ಲವೂ ದೇವೇಗೌಡರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಸಂಬಂಧ ಎಚ್‌.ಡಿ. ರೇವಣ್ಣ ಅವರ ಬಳಿ ವಿಸ್ತೃತವಾಗಿ ಚರ್ಚೆ ಮಾಡಿ ತಾಕೀತು ಮಾಡಿದ್ದಾರೆನ್ನಲಾಗಿದೆ. ಬೆಂಗಳೂರು:  ಪ್ರಜ್ವಲ್‌ ರೇವಣ್ಣ ( Prajwal Revanna Case ) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣ ಹಾಗೂ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಭವಾನಿ ರೇವಣ್ಣ ( Bhavani Revanna ) ಅವರ ನಡೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ( HD Devegowda ) ಗರಂ ಆಗಿದ್ದಾರೆ ಎನ್ನಲಾಗಿದೆ. ಇನ್ನು ಮುಂದೆ ಕುಟುಂಬಕ್ಕೆ ಕೆಟ್ಟ ಹೆಸರು ಬರದಂತೆ ನೋಡಿಕೋ, ಅವರಿಗೆ ಆ ನಿಟ್ಟಿನಲ್ಲಿ ಯಾವ ರೀತಿ ಎಚ್ಚರಿಕೆ ನೀಡುತ್ತೀಯೋ ನಿನಗೆ...

MLC Election: ಪರಿಷತ್ ಚುನಾವಣೆ; ಕಾಂಗ್ರೆಸ್‌ ಅಭ್ಯರ್ಥಿ ಗೆಲುವಿಗೆ ಶ್ರಮಿಸಲು ಕಾರ್ಯಕರ್ತರಿಗೆ ದರ್ಶನಾಪುರ ಮನವಿ

Image
  MLC Election : ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ್ ಅವರನ್ನು ಗೆಲ್ಲಿಸಲು ಜಿಲ್ಲೆಯ ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು ಎಂದು ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಮನವಿ ಮಾಡಿದ್ದಾರೆ. ಯಾದಗಿರಿ ನಗರದಲ್ಲಿ ಈಶಾನ್ಯ ಪದವಿಧರರ ಕ್ಷೇತ್ರ ಚುನಾವಣೆ ನಿಮಿತ್ತ ಜಿಲ್ಲಾ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಪಕ್ಷದ ಮುಖಂಡರ ಹಾಗೂ ಕಾರ್ಯಕರ್ತರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಯಾದಗಿರಿ:  ಈಗಾಗಲೇ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಎದುರಾಗಿದ್ದು ಈ ಚುನಾವಣೆ ಕಾಂಗ್ರೆಸ್ ಪಕ್ಷಕ್ಕೆ ಮಹತ್ವದಾಗಿದೆ, ಚುನಾವಣೆಯಲ್ಲಿ ( MLC Election ) ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ್ ಅವರನ್ನು ಗೆಲ್ಲಿಸಲು ಜಿಲ್ಲೆಯ ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು ಎಂದು ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಕರೆ ನೀಡಿದರು. ನಗರದ ಎಸ್.ಡಿ.ಎನ್ ಹೋಟಲ್ ಸಭಾಂಗಣದಲ್ಲಿ ಈಶಾನ್ಯ ಪದವಿಧರರ ಕ್ಷೇತ್ರ ಚುನಾವಣೆ ನಿಮಿತ್ತ ಜಿಲ್ಲಾ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಪಕ್ಷದ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. First Published on  Vistara News .

Prajwal Revanna Case: ರೇವಣ್ಣಗೆ ಜಾಮೀನು ಹಿನ್ನೆಲೆ ವಿದೇಶದಿಂದ ಪ್ರಜ್ವಲ್‌ ವಾಪಸ್?‌; ಕೋರ್ಟ್‌ಗೆ ಶರಣಾಗುವ ಸಾಧ್ಯತೆ

Image
  Prajwal Revanna Case : ಎಚ್.ಡಿ. ರೇವಣ್ಣಗೆ ಜಾಮೀನು ಸಿಕ್ಕ ಬಳಿಕ ನ್ಯಾಯಲಯದ ಮುಂದೆ ಹಾಜರಾಗುವಂತೆ ರೇವಣ್ಣ ಕುಟುಂಬದ ವಕೀಲರು ಸಲಹೆ ನೀಡಿದ್ದು, ಹೀಗಾಗಿ ಈ ವಾರದಲ್ಲಿಯೇ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಬರುವ ಸಾಧ್ಯತೆಗಳಿವೆ. ಬೆಂಗಳೂರು:  ಮಾಜಿ ಸಚಿವ ರೇವಣ್ಣ ಅವರಿಗೆ ಜಾಮೀನು ಮಂಜೂರಾದ ಬೆನ್ನಲ್ಲೇ ಅಮ್ಮ-ಮಗ ಎಸ್ಐಟಿ ಮುಂದೆ ಹಾಜರಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ತಂದೆಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ( Prajwal Revanna Case ), ನ್ಯಾಯಾಲಯದ ಮುಂದೆ ಶರಣಾಗುವ ಸಾಧ್ಯತೆ ಇದ್ದು, ಬಹುತೇಕ ಈ ವಾರದಲ್ಲೇ ವಿದೇಶದಿಂದ ಆಗಮಿಸಬಹುದು ಎನ್ನಲಾಗಿದೆ. ಎಸ್ಐಟಿ ಮುಂದೆ ಬುಧವಾರ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಆದ್ದರಿಂದ ಬುಧವಾರ ಸಂಜೆ ಬೆಂಗಳೂರಿಗೆ ಬಂದು ಗುರುವಾರ ನ್ಯಾಯಾಲಯದ ಮುಂದೆ ಪ್ರಜ್ವಲ್ ಹಾಜರಾಗಲಿದ್ದಾರೆ ಎನ್ನಲಾಗಿದೆ. ರೇವಣ್ಣಗೆ ಜಾಮೀನು ಸಿಕ್ಕ ಬಳಿಕ ನ್ಯಾಯಲಯದ ಮುಂದೆ ಹಾಜರಾಗುವಂತೆ ರೇವಣ್ಣ ಕುಟುಂಬದ ವಕೀಲರು ಸಲಹೆ ನೀಡಿದ್ದು, ಹೀಗಾಗಿ ಈ ವಾರದಲ್ಲಿಯೇ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಬರುವ ಸಾಧ್ಯತೆಗಳಿವೆ.... First Published on Vistara News .

‌Prajwal Revanna Case: ಜೀವನದಲ್ಲಿ ಮೊದಲ ಬಾರಿಗೆ ಗಡ್ಡ ಬಿಟ್ಟ ದೇವೇಗೌಡರು; ವೈರಿನಾಶಕ್ಕೆ ಶಪಥ!

Image
  ‌Prajwal Revanna Case : ದೇವೇಗೌಡರ ಐವತ್ತು ವರ್ಷಗಳ ಕಾಲದ ಘನತೆಯ ರಾಜಕೀಯ ಜೀವನಕ್ಕೆ ಪೆನ್‌ ಡ್ರೈವ್‌ ಪ್ರಕರಣದಿಂದ ಭಾರಿ ಪೆಟ್ಟು ಬಿದ್ದಿದೆ. ಕುಟುಂಬಕ್ಕೆ ಮುಜುಗರ ಸೃಷ್ಟಿಯಾಗಿದೆ. ಅವಮಾನಿತರಾದ ದೇವೇಗೌಡರು ರೇವಣ್ಣ ಜೈಲಿಗೆ ಹೋದ ಬಳಿಕ, ಎಂದೂ ಗಡ್ಡ ಬಿಡದವರು ಮೊದಲ ಬಾರಿಗೆ ದಾಡಿ ಬಿಟ್ಟಿದ್ದರು. ಡಿಕೆಶಿ ಹಾಗೂ ಸಿದ್ದರಾಮಯ್ಯ ತಮಗೆ ಸೃಷ್ಟಿಸಿರುವ ಅವಮಾನಕ್ಕೆ ಪ್ರತೀಕಾರ ಮಾಡಲು ಎಚ್‌ಡಿಡಿ ಕುಟುಂಬ ಕುದಿಯುತ್ತಿದೆ. ಬೆಂಗಳೂರು : ಮಾಜಿ ಸಚಿವ ಎಚ್‌.ಡಿ ರೇವಣ್ಣ ( HD Revanna Jailed ) ಅವರು ಇಂದು ಜಾಮೀನಿನಲ್ಲಿ ಬಿಡುಗಡೆ ಆಗುತ್ತಿದ್ದು, ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ( Prajwal Revanna Case ) ಕುಟುಂಬಕ್ಕೆ ಆಗಿರುವ ಅವಮಾನದ ಸೇಡು ತೀರಿಸಿಕೊಳ್ಳಲು ರಾಜಕೀಯ ಭೀಷ್ಮ, ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರು (HD Deve Gowda) ಸಜ್ಜಾಗಿದ್ದಾರೆ. ಸದಾ ನೀಟ್‌ ಶೇವ್‌ ಮಾಡಿಕೊಳ್ಳುವ ದೇವೇಗೌಡರು ಮಗ ಜೈಲುಪಾಲಾದ ಬಳಿಕ ಮೊದಲ ಬಾರಿಗೆ ಗಡ್ಡ ಬಿಟ್ಟಿದ್ದು, ಇದೀಗ ಎದುರಾಳಿಗಳನ್ನು ಎದುರಿಸಲು ಎದ್ದು ಕೂತಿದ್ದಾರೆ. ಇಂದು ರೇವಣ್ಣ ಮನೆಗೆ ಹನ್ನೊಂದು ದಿನಗಳ ಹಿಂದೆ ಪದ್ಮನಾಭ ನಗರದ ದೇವೇಗೌಡರ ನಿವಾಸದಲ್ಲೇ ಆರೆಸ್ಟ್ ಆಗಿದ್ದ ಎಚ್‌.ಡಿ ರೇವಣ್ಣ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಜೈಲರ್‌ಗೆ ಬಿಡುಗಡೆ ಆದೇಶ ಪ್ರತಿ ಸಿಗುವವರೆಗೂ ಬಿಡುಗಡೆ ದೊರೆಯುವುದಿಲ್ಲ. ಬೆಳಿಗ್ಗೆ ಹತ್ತುವರೆಗೆ ಕೋರ್ಟ್ ಕಲಾಪ ಆ...

Narendra Modi: ನಾಮಪತ್ರ ಸಲ್ಲಿಕೆಗೂ ಮುನ್ನ ಗಂಗಾರತಿ ಮಾಡಿದ ಮೋದಿ-ಇಲ್ಲಿದೆ ಲೈವ್‌

Image
  Narendra Modi : ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಪ್ರಧಾನಿ ಗಂಗಾ ನದಿಯ ಜೊತೆಗಿನ 10 ವರ್ಷಗಳ ನಂಟಿಗೆ ಸಂಬಂಧಿಸಿದ ವಿಡಿಯೋವೊಂದನ್ನು ಹರಿಬಿಟ್ಟಿದ್ದಾರೆ. ಅಲ್ಲದೇ ಗಂಗಾ ಮಾತೆ ನನ್ನನ್ನು ದತ್ತು ಪಡೆದಿದ್ದಾಳೆ. ಈ ಹತ್ತು ವರ್ಷಗಲ್ಲಿ ನನ್ನ ಮತ್ತು ಗಂಗಾಮಾತೆಯ ಜೊತೆಗಿನ ನಂಟು ಮತ್ತಷ್ಟು ಬಲಿಷ್ಠವಾಗಿದೆ ಎಂದು ಬರೆದಿಕೊಂಡಿದ್ದಾರೆ. ದಶಾಶ್ವಮೇಧ ಘಾಟ್‌ ಭೇಟಿ ಬಳಿಕ ಪ್ರಧಾನಿ ವಾರಾಣಸಿಯಲ್ಲಿರುವ ಕಾಲಭೈರವೇಶ್ವರ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ವಾರಾಣಸಿ:  ಮೂರನೇ ಬಾರಿ ಗೆಲುವಿನ ನಿರೀಕ್ಷೆಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ( Narendra Modi ) ಕೆಲವೇ ಕ್ಷಣಗಳಲ್ಲಿ ವಾರಾಣಸಿ(Varanasi)ಯಲ್ಲಿ ನಾಮಪತ್ರ(Nomination Filing) ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ವಾರಾಣಸಿಯಲ್ಲಿರುವ ದಶಾಶ್ವಮೇಧ ಘಾಟ್‌ಗೆ ಭೇಟಿ ಕೊಟ್ಟ ಮೋದಿ ಗಂಗಾ ನದಿಗೆ ಪೂಜೆ ಸಲ್ಲಿಸಿದರು. ಐದು ಅರ್ಚಕರ ನೇತೃತ್ವದಲ್ಲಿ ಪೂಜೆ ನಡೆದಿದ್ದು, ಗಂಗಾ ನದಿ(Ganga River)ಗೆ ಪ್ರಧಾನಿ ಆರತಿ ಬೆಳಗಿದರು. ಇನ್ನು ಇದಕ್ಕೂ ಮುನ್ನ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಪ್ರಧಾನಿ ಗಂಗಾ ನದಿಯ ಜೊತೆಗಿನ 10 ವರ್ಷಗಳ ನಂಟಿಗೆ ಸಂಬಂಧಿಸಿದ ವಿಡಿಯೋವೊಂದನ್ನು ಹರಿಬಿಟ್ಟಿದ್ದಾರೆ. ಅಲ್ಲದೇ ಗಂಗಾ ಮಾತೆ ನನ್ನನ್ನು ದತ್ತು ಪಡೆದಿದ್ದಾಳೆ. ಈ ಹತ್ತು ವರ್ಷಗಲ್ಲಿ ನನ್ನ ಮತ್ತು ಗಂಗಾಮಾತೆಯ ಜ...

Lok Sabha Election 2024: ಬಳ್ಳಾರಿಗೆ ಕೈಗಾರಿಕೆಗಳನ್ನು ತಂದ ಶ್ರೇಯಸ್ಸು ಕಾಂಗ್ರೆಸ್ ಪಕ್ಷದ್ದು: ನಾರಾ ಭರತ್ ರೆಡ್ಡಿ

Image
  Lok Sabha Election 2024 : ಬಳ್ಳಾರಿ ನಗರದ 3ನೇ ವಾರ್ಡಿನ ಬಂಡಿಮೋಟ್ ಬಳಿ ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈ.ತುಕಾರಾಂ ಪರ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಚುನಾವಣಾ ಪ್ರಚಾರ ಕೈಗೊಂಡು ಮತ ಯಾಚನೆ ನಡೆಸಿದರು. ಬಳ್ಳಾರಿ:  ಬಳ್ಳಾರಿ ಜಿಲ್ಲೆಗೆ ಜಿಂದಾಲ್ ಸ್ಟೀಲ್ ಫ್ಯಾಕ್ಟರಿ, ಬಿಟಿಪಿಎಸ್ ತಂದ ಶ್ರೇಯಸ್ಸು ಕಾಂಗ್ರೆಸ್ (Congress) ಪಕ್ಷದ್ದು, ಆದರೆ ಬಿಜೆಪಿಯವರ (BJP) ಸಾಧನೆ ಶೂನ್ಯ ಎಂದು ನಗರ ಶಾಸಕ ನಾರಾ ಭರತ್ ರೆಡ್ಡಿ ( Lok Sabha Election 2024 ) ಹೇಳಿದರು. ನಗರದ 3ನೇ ವಾರ್ಡಿನ ಬಂಡಿಮೋಟ್ ಬಳಿ ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈ.ತುಕಾರಾಂ ಅವರ ಪರ ಮತಯಾಚಿಸಿ ಅವರು ಮಾತನಾಡಿದರು. ಬಿಜೆಪಿಯವರು ಬಳ್ಳಾರಿಗೆ ನಾಲ್ಕು ಬಾರಿ ಸಂಸದರಾಗಿದ್ದರು, ನಗರಕ್ಕೆ ಶಾಸಕರಾಗಿದ್ದರು, ಆದರೆ ಅವರು ಏನೂ ಕೆಲಸ ಮಾಡಲಿಲ್ಲ. ಅವರು ಮತ ಕೇಳಲು ಬಂದಾಗ ನೀವು ಅವರನ್ನು ಪ್ರಶ್ನೆ ಮಾಡಬೇಕು ಎಂದು ಹೇಳಿದರು. First Published on Vistara News .