MLC Election: ಪರಿಷತ್ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸಲು ಕಾರ್ಯಕರ್ತರಿಗೆ ದರ್ಶನಾಪುರ ಮನವಿ
MLC Election: ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ್ ಅವರನ್ನು ಗೆಲ್ಲಿಸಲು ಜಿಲ್ಲೆಯ ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು ಎಂದು ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಮನವಿ ಮಾಡಿದ್ದಾರೆ. ಯಾದಗಿರಿ ನಗರದಲ್ಲಿ ಈಶಾನ್ಯ ಪದವಿಧರರ ಕ್ಷೇತ್ರ ಚುನಾವಣೆ ನಿಮಿತ್ತ ಜಿಲ್ಲಾ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಪಕ್ಷದ ಮುಖಂಡರ ಹಾಗೂ ಕಾರ್ಯಕರ್ತರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಯಾದಗಿರಿ: ಈಗಾಗಲೇ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಎದುರಾಗಿದ್ದು ಈ ಚುನಾವಣೆ ಕಾಂಗ್ರೆಸ್ ಪಕ್ಷಕ್ಕೆ ಮಹತ್ವದಾಗಿದೆ, ಚುನಾವಣೆಯಲ್ಲಿ (MLC Election) ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ್ ಅವರನ್ನು ಗೆಲ್ಲಿಸಲು ಜಿಲ್ಲೆಯ ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು ಎಂದು ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಕರೆ ನೀಡಿದರು.
ನಗರದ ಎಸ್.ಡಿ.ಎನ್ ಹೋಟಲ್ ಸಭಾಂಗಣದಲ್ಲಿ ಈಶಾನ್ಯ ಪದವಿಧರರ ಕ್ಷೇತ್ರ ಚುನಾವಣೆ ನಿಮಿತ್ತ ಜಿಲ್ಲಾ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಪಕ್ಷದ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

Comments
Post a Comment