PM Narendra Modi: “ಮೊದಲ 100 ದಿನಗಳ ಬ್ಲೂಪ್ರಿಂಟ್‌ ರೆಡಿ; ಹೆಚ್ಚುವರಿ 25 ದಿನ ಯುವಕರಿಗೆ ಮೀಸಲು”- ಪ್ರಧಾನಿ ಮೋದಿ

 PM Narendra Modi: ಪ್ರಧಾನಿ ಮೋದಿ ಕಳೆದೆರಡು ಬಾರಿಯಂತೆ ಈ ಬಾರಿ ಮೊದಲ 100 ದಿನಗಳ ಯೋಜನೆಗಳನ್ನು ಕೈಗೆತ್ತಿಕೊಂಡಿದ್ದಾರೆ. ಈ ಬಾರಿ ಯುವಕರನ್ನು ಗುರಿಯಾಗಿಸಿಯೇ ಯೋಜನೆಯನ್ನು ಕೈಗೆತ್ತಿಕೊಂಡಿದ್ದು ಇದನ್ನು ಹೆಚ್ಚುವರಿ 25 ದಿನಗಳವರೆಗೆ ವಿಸ್ತರಿಸಲಾಗುತ್ತದೆ. ಈ 125 ದಿನಗಳವರೆಗೆ ಮೊದಲ ಬಾರಿಗೆ ಮತದಾನ ಮಾಡಿದವರು, ಯುವಜನತೆಯನ್ನು ಗುರಿಯಾಗಿಸಿ ವಿವಿಧ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಕನಸಿನ ಯೋಜನೆಯಾಗಿರುವ ವಿಕ್ಷಿತ್‌ ಭಾರತ್‌ಗೆ ಯುವಕರು ತಮ್ಮ ಹೊಸ ಐಡಿಯಾಗಳ ಮೂಲಕ ಕೊಡುಗೆ ನೀಡಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.


ನವದೆಹಲಿ: ಲೋಕಸಭೆ ಚುನಾವಣೆ(Lok Sabha Election 2024)ಯ ನಾಲ್ಕನೇ ಹಂತದ ಮತದಾನ ಈಗಾಗಲೇ ಪೂರ್ಣಗೊಂಡಿದೆ. ಇನ್ನು ಮೂರು ಹಂತಗಳ ಮತದಾನ ಬಾಕಿ ಇರುವಾಗಲೇ ಪ್ರಧಾನಿ ನರೇಂದ್ರ ಮೋದಿ(PM Narendra Modi) ಮೂರನೇ ಬಾರಿಗೆ ಗದ್ದುಗೆ ಏರುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅದಷ್ಟೇ ಅಲ್ಲದೇ ಅಧಿಕಾರಕ್ಕೆ ಬಂದ ಕೂಡಲೇ ಮೊದಲ ನೂರು ದಿನಗಳ ಯೋಜನೆ ನೀಲನಕ್ಷೆಯನ್ನು ಬಹಿರಂಗಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ತಮ್ಮ ಮೊದಲ 100 ದಿನಗಳ ಯೋಜನೆ ಬಗ್ಗೆ ಪ್ರಸ್ತಾಪಿಸಿದ್ದು, ಈ ಬಾರಿ ಯುವಕರನ್ನೇ ಗುರಿಯನ್ನಾಗಿಸಿ ಯೋಜನೆ ರೂಪಿಸಾಗುತ್ತದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಕಳೆದೆರಡು ಬಾರಿಯಂತೆ ಈ ಬಾರಿ ಮೊದಲ 100 ದಿನಗಳ ಯೋಜನೆಗಳನ್ನು ಕೈಗೆತ್ತಿಕೊಂಡಿದ್ದಾರೆ. ಈ ಬಾರಿ ಯುವಕರನ್ನು ಗುರಿಯಾಗಿಸಿಯೇ ಯೋಜನೆಯನ್ನು ಕೈಗೆತ್ತಿಕೊಂಡಿದ್ದು ಇದನ್ನು ಹೆಚ್ಚುವರಿ 25 ದಿನಗಳವರೆಗೆ ವಿಸ್ತರಿಸಲಾಗುತ್ತದೆ. ಈ 125 ದಿನಗಳವರೆಗೆ ಮೊದಲ ಬಾರಿಗೆ ಮತದಾನ ಮಾಡಿದವರು, ಯುವಜನತೆಯನ್ನು ಗುರಿಯಾಗಿಸಿ ವಿವಿಧ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಕನಸಿನ ಯೋಜನೆಯಾಗಿರುವ ವಿಕ್ಷಿತ್‌ ಭಾರತ್‌ಗೆ ಯುವಕರು ತಮ್ಮ ಹೊಸ ಐಡಿಯಾಗಳ ಮೂಲಕ ಕೊಡುಗೆ ನೀಡಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಈಗಾಗಲೇ ನಾನು 100ದಿನಗಳ ಯೋಜನೆ ರೂಪಿಸಿ ಆಗಿದೆ. ಇದೀಗ ನಾನು ಯುವಕರಿಗಾಗಿ ಹೆಚ್ಚುವರಿಯಾಗಿ 25ಗಳವರೆಗೆ ಈ ಯೋಜನೆಯನ್ನು ವಿಸ್ತರಿಸಲು ನಿರ್ಧರಿಸಿದ್ದೇನೆ. ಒಟ್ಟು 125 ದಿನಗಳಲ್ಲಿ 25 ದಿನಗಳನ್ನು ಯುವಕರಿಗಾಗಿ ಮೀಸಲಿಟ್ಟಿದ್ದೇನೆ. ಈ ಯೋಜನೆಯಲ್ಲಿ ಯುವಕರು ಸಕ್ರಿಯವಾಗಿ ಭಾಗಿಯಾಗಿ ತಮ್ಮ ಅಭಿಪ್ರಾಯ, ಚಿಂತನೆಯನ್ನು ಹಂಚಿಕೊಳ್ಳಬಹುದಾಗಿದೆ. ಈ ಬಗ್ಗೆ 20 ಲಕ್ಷಕ್ಕೂ ಅಧಿಕ ಜನರಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ ಎಂದು ಅವರು ಹೇಳಿದ್ದಾರೆ...

Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!