Prajwal Revanna Case: ಜೀವನದಲ್ಲಿ ಮೊದಲ ಬಾರಿಗೆ ಗಡ್ಡ ಬಿಟ್ಟ ದೇವೇಗೌಡರು; ವೈರಿನಾಶಕ್ಕೆ ಶಪಥ!
Prajwal Revanna Case: ದೇವೇಗೌಡರ ಐವತ್ತು ವರ್ಷಗಳ ಕಾಲದ ಘನತೆಯ ರಾಜಕೀಯ ಜೀವನಕ್ಕೆ ಪೆನ್ ಡ್ರೈವ್ ಪ್ರಕರಣದಿಂದ ಭಾರಿ ಪೆಟ್ಟು ಬಿದ್ದಿದೆ. ಕುಟುಂಬಕ್ಕೆ ಮುಜುಗರ ಸೃಷ್ಟಿಯಾಗಿದೆ. ಅವಮಾನಿತರಾದ ದೇವೇಗೌಡರು ರೇವಣ್ಣ ಜೈಲಿಗೆ ಹೋದ ಬಳಿಕ, ಎಂದೂ ಗಡ್ಡ ಬಿಡದವರು ಮೊದಲ ಬಾರಿಗೆ ದಾಡಿ ಬಿಟ್ಟಿದ್ದರು. ಡಿಕೆಶಿ ಹಾಗೂ ಸಿದ್ದರಾಮಯ್ಯ ತಮಗೆ ಸೃಷ್ಟಿಸಿರುವ ಅವಮಾನಕ್ಕೆ ಪ್ರತೀಕಾರ ಮಾಡಲು ಎಚ್‌ಡಿಡಿ ಕುಟುಂಬ ಕುದಿಯುತ್ತಿದೆ.
ಬೆಂಗಳೂರು: ಮಾಜಿ ಸಚಿವ ಎಚ್.ಡಿ ರೇವಣ್ಣ (HD Revanna Jailed) ಅವರು ಇಂದು ಜಾಮೀನಿನಲ್ಲಿ ಬಿಡುಗಡೆ ಆಗುತ್ತಿದ್ದು, ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ (Prajwal Revanna Case) ಕುಟುಂಬಕ್ಕೆ ಆಗಿರುವ ಅವಮಾನದ ಸೇಡು ತೀರಿಸಿಕೊಳ್ಳಲು ರಾಜಕೀಯ ಭೀಷ್ಮ, ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು (HD Deve Gowda) ಸಜ್ಜಾಗಿದ್ದಾರೆ. ಸದಾ ನೀಟ್ ಶೇವ್ ಮಾಡಿಕೊಳ್ಳುವ ದೇವೇಗೌಡರು ಮಗ ಜೈಲುಪಾಲಾದ ಬಳಿಕ ಮೊದಲ ಬಾರಿಗೆ ಗಡ್ಡ ಬಿಟ್ಟಿದ್ದು, ಇದೀಗ ಎದುರಾಳಿಗಳನ್ನು ಎದುರಿಸಲು ಎದ್ದು ಕೂತಿದ್ದಾರೆ.
ಇಂದು ರೇವಣ್ಣ ಮನೆಗೆ
ಹನ್ನೊಂದು ದಿನಗಳ ಹಿಂದೆ ಪದ್ಮನಾಭ ನಗರದ ದೇವೇಗೌಡರ ನಿವಾಸದಲ್ಲೇ ಆರೆಸ್ಟ್ ಆಗಿದ್ದ ಎಚ್.ಡಿ ರೇವಣ್ಣ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಜೈಲರ್‌ಗೆ ಬಿಡುಗಡೆ ಆದೇಶ ಪ್ರತಿ ಸಿಗುವವರೆಗೂ ಬಿಡುಗಡೆ ದೊರೆಯುವುದಿಲ್ಲ. ಬೆಳಿಗ್ಗೆ ಹತ್ತುವರೆಗೆ ಕೋರ್ಟ್ ಕಲಾಪ ಆರಂಭವಾಗಲಿದ್ದು, ಹತ್ತುವರೆಗೆ ಪರಪ್ಪನ ಅಗ್ರಹಾರ ಜೈಲಿಗೆ ಜೈಲರ್ ಬರಲಿದ್ದಾರೆ. ರೇವಣ್ಣ ಪರ ವಕೀಲರಿಂದ ಜೈಲರ್‌ಗೆ ಬಿಡುಗಡೆ ಆದೇಶ ಪ್ರತಿ ನೀಡಿ ಹನ್ನೊಂದು ಗಂಟೆ ಬಳಿಕ ಬಿಡುಗಡೆ ಸಾಧ್ಯತೆ ಇದೆ. ಬಹುತೇಕ ಅಭಿಜಿನ್ ಮುಹೂರ್ತ 11.40ರ ಸಮಯದಲ್ಲಿ ಬಿಡುಗಡೆ ಸಾಧ್ಯತೆ ಇದೆ.
ರೇವಣ್ಣ ಬಿಡುಗಡೆ ಬಳಿಕ ನೇರವಾಗಿ ಪದ್ಮನಾಭ ನಗರಕ್ಕೆ ಆಗಮಿಸುವ ಸಾಧ್ಯತೆ ಇದೆ. ರೇವಣ್ಣ ಬಿಡುಗಡೆಯಿಂದ ಗೌಡರ ಕುಟುಂಬದಲ್ಲಿ ಸಂತೋಷ ಮೂಡಿದ್ದು, ಬಿಡುಗಡೆ ಬಳಿಕ ತಂದೆ ದೇವೇಗೌಡರು, ಹೆಚ್‌ಡಿಕೆ ಸೇರಿ ಕುಟುಂಬ ಸದಸ್ಯರ ಜೊತೆಗೆ ರೇವಣ್ಣ ಚರ್ಚೆ ನಡೆಸುವ ಸಾಧ್ಯತೆ ಇದೆ. ಮಾಜಿ ಪಿಎಂ ಎಚ್.ಡಿ ದೇವೇಗೌಡರ ಆಶೀರ್ವಾದ ಪಡೆದು ಬಳಿಕ ಮುಂದಿನ ಕೆಲಸಗಳಿಗಾಗಿ ಹಾಸನ ಕಡೆ ಹೊರಡಲಿದ್ದಾರೆ.
First Published on Vistara News.

Comments
Post a Comment