Prajwal Revanna Case: ನಾನು ಹೊರಬಂದ್ರೆ ಸರ್ಕಾರ ಪತನ ಎಂದ ದೇವರಾಜೇಗೌಡ; ಹಾಗಾದ್ರೆ ಜೈಲಲ್ಲೇ ಇರ್ತಾರೆ ಎಂದ ಪರಮೇಶ್ವರ್‌

 Prajwal Revanna Case: ಡಿಸಿಎಂ ಡಿಕೆಶಿ ವಿರುದ್ಧ ವಕೀಲ ದೇವರಾಜೇಗೌಡ ಆರೋಪಗಳ ಬಗ್ಗೆ ತುಮಕೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರತಿಕ್ರಿಯಿಸಿದ್ದಾರೆ.


ತುಮಕೂರು: ದೇಶಾದ್ಯಂತ ಸಂಚಲನ ಮೂಡಿಸಿರುವ ಹಾಸನ ಪೆನ್‌ಡ್ರೈವ್‌ ಪ್ರಕರಣದ (Prajwal Revanna Case) ಹಿಂದಿನ ಮಾಸ್ಟರ್‌ ಮೈಂಡ್‌ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ ಎಂದು ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿದ್ದಾರೆ. ಜತೆಗೆ ಪ್ರಕರಣದಲ್ಲಿ ಶಾಮೀಲಾಗಲು 100 ಕೋಟಿ ರೂ. ಆಫರ್‌ ನೀಡಿದ್ದರು ಎಂದು ಹೇಳಿದ್ದಾರೆ. ಇನ್ನು ನಾನು ಹೊರಗೆ ಬಂದರೆ ಸರ್ಕರ ಪತನವಾಗುತ್ತದೆ ಎಂಬ ದೇವರಾಜೇಗೌಡ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಅವರು, ಹಾಗಾದರೆ ಅವರು ಜೇಲಲ್ಲೇ ಇರಬೇಕಾಗುತ್ತೆ ಎಂದು ಹೇಳಿರುವುದು ಕಂಡುಬಂದಿದೆ.

ಡಿಕೆಶಿ ವಿರುದ್ಧ ವಕೀಲ ದೇವರಾಜೇಗೌಡ ಆರೋಪಗಳ ಬಗ್ಗೆ ನಗರದಲ್ಲಿ ಪ್ರತಿಕ್ರಿಯಿಸಿರುವ ಅವರು, ಆರೋಪಗಳ ಸಾಧಕ ಬಾಧಕಗಳನ್ನು ನೋಡಿ ಎಸ್‌ಐಟಿ ತನಿಖೆ ಮಾಡುತ್ತಾರೆ ಎಂದು ತಿಳಿಸಿದ್ದಾರೆ. ಇನ್ನು ನಾನು ಹೊರಗೆ ಬಂದ್ರೆ ಸರ್ಕಾರ ಪತನ ಆಗುತ್ತೆ ಎಂಬ ದೇವರಾಜೇಗೌಡ ಹೇಳಿಕೆಗೆ ಪ್ರತಿಕ್ರಿಯಿಸಿ, ಹಾಗಾದ್ರೆ ಅವರು ಅಲ್ಲೇ ಇರಬೇಕಾಗುತ್ತೆ ಎಂದು ಮುಗುಳ್ನಗುವ ಮೂಲಕ ಪರೋಕ್ಷವಾಗಿ ಅವರು ಜೈಲಲ್ಲೇ ಇರಬೇಕಾಗುತ್ತದೆ ಎಂದು ಹೇಳಿದ್ದಾರೆ.


Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!